ಸಚಿವ ಡಿ.ಕೆ. ಶಿವಕುಮಾರ್ ತಾಯಿಗೆ ಐಟಿ ಶಾಕ್

ಗುರುವಾರ, 3 ಜನವರಿ 2019 (14:09 IST)
ಬೆಂಗಳೂರು : ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ತಾಯಿಗೆ ತೆರಿಗೆ ಇಲಾಖೆ ನೋಟಿಸ್ ಕಳುಹಿಸುವ ಮೂಲಕ ಇದೀಗ ಸಚಿವ ಡಿ.ಕೆ. ಶಿವಕುಮಾರ್ ಅವರಿಗೂ ಐಟಿ ಶಾಕ್ ಕೊಟ್ಟಿದೆ.


ಈಗಾಗಲೇ ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್, ಸುದೀಪ್, ಪುನೀತ್ ರಾಜ್ ಕುಮಾರ್, ಯಶ್, ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್, ವಿಜಯ್ ಕಿರಂಗದೂರು, ಮನೋಹರ್ ಮನೆ ಮೇಲೆ ಬೆಳ್ಳಂಬೆಳ್ಳಗೆ ಐಟಿ ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ದಾಳಿ ನಡೆಸಿದ್ದು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದು, ಪರೀಕ್ಷೆ ಮಾಡುತ್ತಿದ್ದಾರೆ.


ಈ ನಡುವೆ ಸಚಿವ ಡಿ.ಕೆ. ಶಿವಕುಮಾರ್ ತಾಯಿ ಗೌರಮ್ಮ ಅವರಿಗೂ ತೆರಿಗೆ ಇಲಾಖೆ ನೋಟಿಸ್ ಕಳುಹಿಸಿದೆ. ಗೌರಮ್ಮ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಕನಕಪುರದ ದೊಡ್ಡ ಆಲಹಳ್ಳಿಯ ನಿವಾಸದಲ್ಲಿ ಐಟಿ ಅಧಿಕಾರಿಗಳು ನೋಟಿಸ್ ಅಂಟಿಸಿ ಹೋಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ