ರಾಜ್ಯದಲ್ಲಿ ಮುಂದಿನ 3 ದಿನ ಮಳೆ

ಮಂಗಳವಾರ, 30 ಆಗಸ್ಟ್ 2022 (15:56 IST)
ರಾಜ್ಯಾದ್ಯಂತ ಮುಂದಿನ 3 ದಿನಗಳ ಕಾಲ ಗುಡುಗು ಮಿಂಚಿನೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ 5 ದಿನ ಮಳೆಯಾಗಲಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲೂ 5 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಧಾರವಾಡ, ಗದಗ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರಗಿ ಜಿಲ್ಲೆಗಳಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ