ಮಾಧ್ಯಮಗಳ ಮೇಲೆ ನಿಯಂತ್ರಣ ಹೇರುವುದು ಸುಲಭವಲ್ಲ: ಕಾಗೋಡು

ಶನಿವಾರ, 1 ಏಪ್ರಿಲ್ 2017 (18:05 IST)
ಮಾಧ್ಯಮಗಳು ವಾಕ್ ಸ್ವಾತಂತ್ರ್ಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ಅವುಗಳ ಮೇಲೆ ನಿಯಂತ್ರಣ ಹೇರುವುದು ಸುಲಭವಲ್ಲ ಎಂದು ಕಂದಾಯ ಖಾತೆ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
 
ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಲು ಆರೋಗ್ಯ ಖಾತೆ ಸಚಿವ ರಮೇಶ್ ಕುಮಾರ್ ನೇತೃತ್ವದಲ್ಲಿ ರಚಿಸಲಾದ ಸದನ ಸಮಿತಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಶಾಸಕಾಗ ಮತ್ತು ಮಾಧ್ಯಮ ರಂಗ ಪರಸ್ಪರ ಗೌರವಯುತವಾಗಿ ನಡೆದುಕೊಂಡು ಸ್ವಯಂ ನಿಯಂತ್ರಣ ಹೇರಿಕೊಳ್ಳುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.
 
ಮಾಧ್ಯಮಗಳು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸಬೇಕು. ಪೂರ್ವಾಗ್ರಹ ಪೀಡಿತರಾಗಿ ಕಾರ್ಯನಿರ್ವಹಿಸುವುದು ಸೂಕ್ತವಲ್ಲ. ರಾಜಕಾರಣಿಗಳು ಕೂಡಾ ತಮ್ಮ ಘನತೆ ಗೌರವಕ್ಕೆ ಧಕ್ಕೆಯಾಗದಂತೆ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸಬೇಕಾಗಿದೆ ಎಂದರು.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ನಂತರ ಜನಪರ ಕಾರ್ಯಗಳಿಗೆ ಚಾಲನೆ ನೀಡಿದ್ದರಿಂದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಕಂದಾಯ ಖಾತೆ ಸಚಿವ ಕಾಗೋಡು ತಿಮ್ಮಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ