ಸಿಎಂ ಸಿದ್ದರಾಮಯ್ಯ ಬಲ್ಡೋಟಾ ಉದ್ಯಮಿಯಿಂದ ಕಪ್ಪು ಹಣ ಪಡೆದಿದ್ದಾರೆ: ಜಗದೀಶ್ ಶೆಟ್ಟರ್

ಶುಕ್ರವಾರ, 30 ಡಿಸೆಂಬರ್ 2016 (09:34 IST)
ಕಪ್ಪತ್ತಗುಡ್ಡ ಸಂರಕ್ಷಿತ ಅರಣ್ಯವಲಯ ಆದೇಶವನ್ನು ವಾಪಸ್ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಯಮಿ ಬಲ್ಡೋಟಾದಿಂದ ಕಪ್ಪು ಹಣ ಪಡೆದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. 
 
ಹಾವೇರಿ ಜಿಲ್ಲೆಯಲ್ಲಿ ಬರ ಅಧ್ಯಯನಕ್ಕೆ ಆಗಮಿಸಿದ್ದ ಅವರು, ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ಆದೇಶವನ್ನು ಸಿಎಂ ಸಿದ್ದರಾಮಯ್ಯ ಕೂಡಲೇ ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು. 
 
ಎಸಿಬಿ ಮತ್ತು ಸಿಐಡಿ ಸರಕಾರದ ಪರವಾಗಿ ಕಾರ್ಯನಿರ್ವಹಿಸುತ್ತಿವೆ. ಎಸಿಬಿಯನ್ನು ಸಿಎಂ ಸಿದ್ದರಾಮಯ್ಯ ಭ್ರಷ್ಟರ ರಕ್ಷಣೆಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. 
 
ಈ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಗಾಲಕ್ಕೆ ಬಿಡುಗಡೆ ಮಾಡಿರುವ ಹಣದ ಕುರಿತು ಶ್ವೇತಪತ್ರ ಹೊರಡಿಸುವಂತೆ ಆಗ್ರಹಿಸಿದರು. ಸಿಐಡಿ ಕಾಂಗ್ರೆಸ್ ಇನ್ವಸ್ಟಿಗೇಷನ್ ಡಿಪಾರ್ಟ್‌ಮೆಂಟ್ ಆಗಿದ್ದು ಮಾಜಿ ಸಚಿವ ಮೇಟಿ ರಾಸಲೀಲೆ ಪ್ರಕರಣದಲ್ಲಿ ಕ್ಲೀನ್‌ಚೀಟ್ ನೀಡುವುದು ಗ್ಯಾರಂಟಿ ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅಭಿಪ್ರಾಯಪಟ್ಟಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ