ಸಿಎಂ ಸಿದ್ದರಾಮಯ್ಯ ವಿರುದ್ಧ ಜಗದೀಶ್ ಶೆಟ್ಟರ್ ವಾಗ್ದಾಳಿ

ಮಂಗಳವಾರ, 22 ಆಗಸ್ಟ್ 2017 (16:07 IST)
ಸಿಎಂ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ದೂರು ದಾಖಲಾದರೆ ಯಾವುದೇ ಕ್ರಮವಿಲ್ಲ. ಆದರೆ, ಯಡಿಯೂರಪ್ಪ ವಿರುದ್ಧ ದೂರು ನೀಡಿದ ದಿನವೇ ಎಫ್ಐಆರ್ ಹಾಕಲಾಗುತ್ತದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರಿಗೆ ಕೆಟ್ಟ ಇಮೇಜ್ ಸೃಷ್ಟಿಸಲು ದೂರು ದಾಖಲಿಸಲಾಗುತ್ತಿದೆ. ಎಸಿಬಿ ಅಧಿಕಾರಿಗಳು ಪದೇ ಪದೇ ಸಮನ್ಸ್ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಎಸಿಬಿ ಅಧಿಕಾರಿಗಳ ವರ್ತನೆ ನೋಡಿದಲ್ಲಿ ತುರ್ತುಪರಿಸ್ಥಿತಿ ಪುನರಾವರ್ತನೆಯಾಗಿದೆಯೋ ಎನ್ನುವ ಭಾವನೆ ಉಂಟಾಗುತ್ತಿದೆ. ಯಡಿಯೂರಪ್ಪ ವಿರುದ್ಧ ಸುಳ್ಳು ಕೇಸ್ ದಾಖಲಿಸಲಾಗಿದೆ ಎಂದು ಕಿಡಿಕಾರಿದ್ದಾರೆ.
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ನಾಲ್ಕು ವರ್ಷಗಳ ನಂತರ ಎಸಿಬಿ ದುರ್ಬಳಕೆ ಮಾಡಿಕೊಂಡಿದೆ. ಬಿಜೆಪಿಗೆ ಕೆಟ್ಟ ಹೆಸರು ತರುವ ಕುತಂತ್ರ ಕಾಂಗ್ರೆಸ್ ಮಾಡುತ್ತಿದೆ. ಚುನಾವಣೆ ಸಂದರ್ಭದಲ್ಲಿ ಸ್ವತಂತ್ರ ಲಿಂಗಾಯುತ ಧರ್ಮ ಎನ್ನುವ ಬಿಕ್ಕಟ್ಟು ಸೃಷ್ಟಿಸಿ ಮತಸೆಳೆಯಲು ಪ್ರಯತ್ನಿಸುತ್ತಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗುಡುಗಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ