ಜಗದೀಶ್ ಶೆಟ್ಟರ್ ವಿರುದ್ಧ ಜಾರಕಿಹೊಳಿ ವಾಗ್ದಾಳಿ

ಭಾನುವಾರ, 16 ಏಪ್ರಿಲ್ 2023 (16:10 IST)
ಬೆಳಗಾವಿ : ಜಗದೀಶ್ ಶೆಟ್ಟರ್ ಎಲ್ಲಾ ಹುದ್ದೆಗಳನ್ನು ಅನುಭವಿಸಿದ್ದರೂ ಸಹ ಬಿಜೆಪಿ ತೊರೆದಿದ್ದಾರೆ. ಅವರೇನೂ ದೊಡ್ಡ ನಾಯಕರಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.
 
ನಗರದ ಧರ್ಮನಾಥ್ ಭವನದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಎಲ್.ಕೆ ಅಡ್ವಾಣಿಯಂತಹ ದೊಡ್ಡ ನಾಯಕರೇ ಬಹು ದೊಡ್ಡ ತ್ಯಾಗಗಳನ್ನು ಮಾಡಿದ್ದಾರೆ. ಆದರೆ ಎಲ್ಲಾ ಅಧಿಕಾರವನ್ನು ಅನುಭವಿಸಿ ಕೆಲವರು ಪಕ್ಷವನ್ನು ತೊರೆಯುತ್ತಿದ್ದಾರೆ. ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ. ಹೋಗುವವರು ಹೋಗಲಿ ಪಕ್ಷ ಸ್ವಚ್ಛ ಆಗುತ್ತದೆ ಎಂದಿದ್ದಾರೆ. 

ಮಾಜಿ ಶಾಸಕ ಸಂಜಯ್ ಪಾಟೀಲ್ ಹಾಗೂ ಧನಂಜಯ ಜಾಧವ್ ಇಬ್ಬರೂ ಬೆಳಗಾವಿ ಗ್ರಾಮೀಣ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿಗಳಾಗಿದ್ದರು. ಆದರೆ ಮೂರನೇಯವರಿಗೆ ಟಿಕೆಟ್ ಸಿಕ್ಕರೂ ಸಭೆಯಲ್ಲಿ ಮನಪೂರ್ವಕವಾಗಿ ಭಾಗವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಸನ್ನಿವೇಶ ಬಿಜೆಪಿಯಲ್ಲಿ ಮಾತ್ರ ನೋಡಲು ಸಾಧ್ಯ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ