ಕುಮಾರಸ್ವಾಮಿ ಪೋನ್ ಕದ್ದಾಲಿಕೆ ಮಾಡಿರೋದು ಮೇಲ್ನೋಟಕ್ಕೆ ದೃಢ- ಜಗದೀಶ್ ಶೆಟ್ಟರ್ ಹೇಳಿಕೆ

ಸೋಮವಾರ, 19 ಆಗಸ್ಟ್ 2019 (12:14 IST)
ಬೆಂಗಳೂರು : ಕುಮಾರಸ್ವಾಮಿಯವರು ಪೋನ್ ಕದ್ದಾಲಿಕೆ ಮಾಡಿರೋದು ಮೇಲ್ನೋಟಕ್ಕೆ ದೃಢವಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸ ಧವಳಗಿರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್, ಹೆಚ್ ಡಿ ಕುಮಾರಸ್ವಾಮಿಯವರು ಮೇಲ್ನೋಟಕ್ಕೆ ಪೋನ್ ಕದ್ದಾಲಿಕೆ ಮಾಡಿರೋದು ದೃಢವಾಗಿದೆ. ಇಂತಹ ಪ್ರಕರಣವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಿಬಿಐ ತನಿಖೆಗೆ ನೀಡಿದ್ದಾರೆ. ಇದರಿಂದ ಯಾರು ಯಾರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಸತ್ಯಾಸತ್ಯತೆ ಹೊರ ಬೀಳಲಿದೆ ಎಂದು ಹೇಳಿದ್ದಾರೆ.

 

ಟೆಲಿಗ್ರಾಫ್ ಕಾಯ್ದೆಯ ಪ್ರಕಾರ ಟೆಲಿಫೋನ್  ಕದ್ದಾಲಿಕೆ ಶಿಕ್ಷಾರ್ಹ ಅಪರಾಧ. ಹೀಗಾಗಿ ಕದ್ದಾಲಿಕೆ ಪ್ರಕರಣವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಿಬಿಐಗೆ ವಹಿಸಿರೋದನ್ನು ಸ್ವಾಗತಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ