ಜಮೀರ್ ಗೆ ಕಂಟಕವಾಯ್ತು ವಿಡಿಯೋ,ಬಿಜೆಪಿ ವ್ಯಂಗ್ಯ
ದೆಹಲಿಯಿಂದ ವಾಪಸ್ ಬರುವಾಗ CM ಸಿದ್ರಾಮಯ್ಯ ಅವರಜೊತೆ ಸಚಿವ ಜಮೀರ್ ಅಹ್ಮದ್ ಖಾನ್ ಐಷಾರಾಮಿ ವಿಮಾನದಲ್ಲಿ ಪ್ರಯಾಣಿಸಿದ್ದಾರೆ.
ಈ ಪ್ರಯಾಣಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಿಜೆಪಿ, ಪಕ್ಷದ ರಾಜ್ಯಾದ್ಯಕ್ಷ ಬಿವೈ ವಿಜಯೇಂದ್ರ ಆಕ್ರೋಷ ವ್ಯಕ್ತ ಪಡಿಸಿದ್ದು ರಾಜ್ಯದಲ್ಲಿ ಬರ ಬಂದು ಜನತೆ ಸಂಕಷ್ಟದಲ್ಲಿದ್ದರೆ ಮಜಾವಾದಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಆಪ್ತ ಜಮೀರ್ ಅಹ್ಮದ್ ಖಾನ್ ಆಡಂಬರಕ್ಕೇನು ಕಡಿಮೆ ಇಲ್ಲ ಎಂದು ಕಿಡಿಕಾರಿದ್ದಾರೆ.