ಜಮ್ಮು ಕಾಶ್ಮೀರ ಪ್ರತ್ಯೇಕತವಾದಿ ಯಾಸಿನ್ ಮಲಿಕ್ ಗೆ ಜೀವಾವಧಿ ಶಿಕ್ಷೆ!
ಬುಧವಾರ, 25 ಮೇ 2022 (19:18 IST)
ಉಗ್ರ ಸಂಘಟನೆಗಳಿಗೆ ನಿಧಿ ಸಂಗ್ರಹ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಭಯೋತ್ಪಾದನೆಗೆ ಆರ್ಥಿಕ ನೆರವು ಪ್ರಕರಣದಲ್ಲಿಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ)ಕಾಯ್ದೆ ಸೇರಿದಂತೆ ಎಲ್ಲಾ ಆರೋಪಗಳ ಹಿನ್ನೆಲೆಯಲ್ಲಿ ವಿಶೇಷ ಎನ್ ಐಎ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಯಾಸಿನ್ ಮಲಿಕ್ ಗೆ ಜೀವಾವಧಿ ಶಿಕ್ಷೆ ಅಲ್ಲದೇ ಎರಡು ಪ್ರಕರಣಗಳಲ್ಲಿ 10 ಲಕ್ಷ ರೂ. ಮತ್ತು 10 ಸಾವಿರ ರೂ. ದಂಡ ವಿಧಿಸಲಾಗಿದೆ.
ವಿಶೇಷ ನ್ಯಾಯಾಧೀಶ ಪ್ರವೀಣ್ ಸಿಂಗ್ ಅವರ ಮುಂದೆ ಸಂಸ್ಥೆಯು ಕೋರಿಕೆ ಸಲ್ಲಿಸಿದ್ದು, ಯಾಸಿನ್ ಮಲಿಕ್ಗೆ ಸಹಾಯ ಮಾಡಲು ನ್ಯಾಯಾಲಯ ನೇಮಿಸಿದ ಅಮಿಕಸ್ ಕ್ಯೂರಿ ಕನಿಷ್ಠ ಶಿಕ್ಷೆ ಜೀವಾವಧಿ ಶಿಕ್ಷೆಯನ್ನು ಕೋರಿದರು.
ಈ ಮಧ್ಯೆ, ಶಿಕ್ಷೆಯ ಪ್ರಮಾಣವನ್ನು ನಿರ್ಧರಿಸಲು ನ್ಯಾಯಾಲಯಕ್ಕೆ ಬಿಡುತ್ತಿದ್ದೇನೆ ಎಂದು ಮಲಿಕ್ ನ್ಯಾಯಾಧೀಶರಿಗೆ ತಿಳಿಸಿದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯವು ತನ್ನ ಆದೇಶವನ್ನು ಕಾಯ್ದಿರಿಸಿದ್ದು, ಇಂದು ಅಪರಾಹ್ನ ಆದೇಶ ನೀಡುವ ಸಾಧ್ಯತೆಯಿದೆ.
ನ್ಯಾಯಾಲಯವು ಕಳೆದ ಮೇ 19 ರಂದು ಮಲಿಕ್ ದೋಷಿ ಎಂದು ಘೋಷಿಸಿತ್ತು. ವಿಧಿಸಬಹುದಾದ ದಂಡದ ಮೊತ್ತವನ್ನು ನಿರ್ಧರಿಸಲು ಅವರ ಆರ್ಥಿಕ ಪರಿಸ್ಥಿತಿಯನ್ನು ನಿರ್ಣಯಿಸಲು NIA ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.