ಸಿದ್ದರಾಮಯ್ಯ ರಾಜೀನಾಮೆಗೆ ಪೂಜಾರಿ ಪಟ್ಟು

ಮಂಗಳವಾರ, 1 ನವೆಂಬರ್ 2016 (10:47 IST)
ಮಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕೆಂದರೆ ಮೊದಲು ಸಿದ್ದರಾಮಯ್ಯ ಮುಖ್ಯಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ.
 

 
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಖಾಸಗಿ ವಾಹಿನಿಯೊಂದು ನಡೆಸಿದ ಸಮೀಕ್ಷೆಯಲ್ಲಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸುವುದು ಕಷ್ಟ ಎಂದು ವರದಿಯಾಗಿದೆ. ದೆ. ಸಂಬಂಧಿಸಿ ರಾಜ್ಯ ನಾಯಕರುವಹಾಗೂ ಪಕ್ಷದ ಹೈಕಮಾಂಡ್ ಗಂಭೀರ ಚಿಂತನೆ ನಡೆಸಬೇಕು. ಇತಗತೀಚೆಗೆ ಕಾಂಗ್ತೆಸ್ ಜನಸಾಮಾನ್ಯರ ವಿಶ್ವಾಸ ಉಳಿಸಿಕೊಳ್ಳಲು ಎಡವುತ್ತಿದೆ ಎಂದೆನಿಸುತ್ತಿದೆ. ಸಾರ್ವಜನಿಕ ವಲಯದಲ್ಲೂ ಈ ಮಾತು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಹಾಗೂ ಮುಂಬರುವ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಸಿದ್ದರಾಮಯ್ಯ ತಮ್ಮ ಮುಖ್ಯಮಂತ್ರಗಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ತೆರವಾದ ಅವರ ಸ್ಥಾನಕ್ಕೆ ಜಿ. ಪರಮೇಶ್ವರ ಅವರನ್ನು ಕುಳ್ಳಿರಿಸಬೇಕು ಎಂದರು.
 
ಡಾ. ಜಿ. ಪರಮೇಶ್ವರ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಿದರೆ ರಾಜ್ಯದಲ್ಲಿ ಮೊದಲ ಬಾರಿಗೆ ಆ ಹುದ್ದೆಯನ್ನು ದಲಿತರಿಗೆ ನೀಡಿದಂತಾಗುತ್ತದೆ. ಅದು ಚುನಾವಣೆ ಸಂದರ್ಭದಲ್ಲಿ ಸಕಾರಾತ್ಮಕ ಪರಿಣಾಮ ಬೀರಲು ಸಹಕಾರಿಯಾಗುತ್ತದೆ. ಅಲ್ಲದೆ, ಸಿದ್ದರಾಮಯ್ಯರ ವಿರುದ್ಧ ರಾಜ್ಯ ಕಾಂಗ್ರೆಸ್ ನಲ್ಲಿ ಅಸಮಾಧಾನದ ಹೊಗೆಯಾಡುತ್ತಿದೆ. ಪಕ್ಷದ ಹೊರಗಿನಕ್ಕಿಂತ ಒಳಗಿನ ಅಪಸ್ವರವೇ ಜಾಸ್ತಿಯಾಗುತ್ತಿದೆ. ಈ ಎಲ್ಲ ಕಾರಣದಿಂದ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಒಳಿತು ಎಂದ ಪೂಜಾರಿ, ಶಾಸಕರಿಗೆ ನಿಗಮ ಮಂಡಳಿಯ ಸ್ಥಾನ ನೀಡಲು ಹೊರಟಿರುವುದು ಸರಿಯಲ್ಲ. ಇದರಿಂದ ಪಕ್ಷದ ಕಾರ್ಯಕರ್ತರನ್ನು ನಿರ್ಲಕ್ಷಿಸಿದಂತಾಗುತ್ತದೆ ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ