ಬಳ್ಳಾರಿ ಪ್ರವೇಶಕ್ಕೆ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಅನುಮತಿ!

ಗುರುವಾರ, 19 ಆಗಸ್ಟ್ 2021 (17:27 IST)
ಭ್ರಷ್ಟಾಚಾರ ಪ್ರಕರಣದ ವಿಚಾರಣೆ ಎದುರಿಸುತ್ತಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಜನಪ್ರತಿನಿಧಿ ವಿಶೇಷ ನ್ಯಾಯಾಲಯ ಬಳ್ಳಾರಿ ಪ್ರವೇಶಿಸಲು ಷರತ್ತುಬದ್ಧ ಅನುಮತಿ ನೀಡಿದೆ
.
ಸುಪ್ರೀಂಕೋರ್ಟ್ ನ್ಯಾಯಮೂರ್ತಿ ವಿನೀತ್ ಸಾರನ್ ವರ ಮಹಾಲಕ್ಷ್ಮೀ ಹಬ್ಬದ ಹಿಂದಿನ ದಿನವಾದ ಗುರುವಾರ ಜನಾರ್ದನ ರೆಡ್ಡಿಗೆ ತವರು ಜಿಲ್ಲೆ ಬಳ್ಳಾರಿಗೆ ಪ್ರವೇಶಿಸಲು ಅನುಮತಿ ನೀಡಿದ್ದಾರೆ.
ಸಾಕ್ಷ್ಯ ನಾಶದ ಭೀತಿ ಹಿನ್ನೆಲೆಯಲ್ಲಿ ಜನಾರ್ದನ ರೆಡ್ಡಿಗೆ ಬಳ್ಳಾರಿ ಪ್ರವೇಶಿಸದಂತೆ ಈ ಹಿಂದೆ ಸೂಚಿಸಲಾಗಿತ್ತು. ಇದೀಗ ಬಳ್ಳಾರಿ ಪ್ರವೇಶಿಸಲು ಅವಕಾಶ ನೀಡಿದ್ದರೂ ಅನಂತಪುರಂ ಜಿಲ್ಲೆ ಪ್ರವೇಶಿಸದಂತೆ ಸೂಚನೆ ಪಾಲಿಸುವಂತೆ ಆದೇಶಿಸಿದೆ.
ಇದೇ ವೇಳೆ ಬಳ್ಳಾರಿ ಪ್ರವೇಶಿಸಿದ ಮೇಲೆ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸುವುದು ಸೇರಿದಂತೆ ಯಾವುದೇ ಆರೋಪಗಳು ಬಾರದಂತೆ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ