ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು

ಸೋಮವಾರ, 30 ನವೆಂಬರ್ 2015 (15:30 IST)
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ಬೆಂಗಳೂರಿನ   ಲೋಕಾಯುಕ್ತ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಎಸ್‌ಐಟಿ ಪೊಲೀಸರು ಅಕ್ರಮ ಅದಿರು ಸಾಗಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಡ್ಡಿ ವಿರುದ್ಧ ಹೊಸ ಕೇಸು ದಾಖಲಿಸಿ ಅವರನ್ನು ಬಂಧಿಸಿ  ಡಿ. 3ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.

 ಈಗ ಲೋಕಾಯುಕ್ತ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದ್ದು,  2 ಲಕ್ಷ ರೂ. ಮೌಲ್ಯದ ಬಾಂಡ್, ಇಬ್ಬರ ಶ್ಯೂರಿಟಿ ಒದಗಿಸಬೇಕು ಮತ್ತು ತನಿಖೆಗೆ ಸಹಕರಿಸಬೇಕು ಮತ್ತು ಸಾಕ್ಷ್ಯ ನಾಶಮಾಡಬಾರದು ಮುಂತಾದ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದೆ.
 
ಬ್ಲ್ಯಾಕ್ ಗೋಲ್ಡ್‌ ಐರನ್‌ ಓರ್‌ ಮೈನ್ಸ್‌ ಅಂಡ್‌ ಮಿನರಲ್ಸ್‌ ಕಂಪೆನಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಸೇರಿ ರೆಡ್ಡಿ ಅವರು ಅಕ್ರಮ ಗಣಿಗಾರಿಕೆ ನಡೆಸಿದ್ದರು ಎಂಬ ಆರೋಪದ ಮೇಲೆ ಹೊಸ ಕೇಸ್ ದಾಖಲಿಸಿ ಅವರನ್ನು ಬಂಧಿಸಲಾಗಿತ್ತು. ಲೋಕಾಯುಕ್ತ ವಿಶೇಷ ನ್ಯಾಯಾಲಯ ರೆಡ್ಡಿ ಅವರನ್ನು ಸೋಮವಾರ ವರೆಗೆ ಎಸ್‌ಐಟಿ ವಶಕ್ಕೆ ಒಪ್ಪಿಸಿತ್ತು. 

ವೆಬ್ದುನಿಯಾವನ್ನು ಓದಿ