ನನ್ನ ಸಹಾಯಕ್ಕೆ ಯಾರೂ ಬರುತ್ತಿಲ್ಲ..! ಬಿಜೆಪಿ ಮೇಲೆ ಜನಾರ್ಧನ ರೆಡ್ಡಿ ಬೇಸರ

ಶುಕ್ರವಾರ, 16 ನವೆಂಬರ್ 2018 (09:33 IST)
ಬೆಂಗಳೂರು: ಆಂಬಿಡೆಂಟ್ ಕಂಪನಿ ಅವ್ಯವಹಾರ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಯಾದ ಮಾಜಿ ಸಚಿವ ಜನಾರ್ಧನ ರೆಡ್ಡಿ ತಮ್ಮ ಸಹಾಯಕ್ಕೆ ಬಿಜೆಪಿಯ ಯಾವೊಬ್ಬರು ನಾಯಕರೂ ಬರುತ್ತಿಲ್ಲ ಎಂದು ಬೇಸರಗೊಂಡಿದ್ದಾರಂತೆ.

ತಮ್ಮ ಬೇಸರವನ್ನು ರೆಡ್ಡಿ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎಂದು ಖಾಸಗಿ ವಾಹಿನಿಯೊಂದು ಅವರ ಆಪ್ತ ಮೂಲಗಳ ಹೇಳಿಕೆ ಉಲ್ಲೇಖಿಸಿ ವರದಿ ಮಾಡಿದೆ. ರೆಡ್ಡಿ ಜೈಲಿನಲ್ಲಿದ್ದಾಗ ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ರೆಡ್ಡಿ ಈಗ ಬಿಜೆಪಿಯಲ್ಲಿ ಇಲ್ಲ. ಹಾಗಾಗಿ ಅವರ ಬಗ್ಗೆ ನಾನೇನು ಕಾಮೆಂಟ್ ಮಾಡಲ್ಲ ಎಂದು ಜಾರಿಕೊಂಡಿದ್ದರು. ಹೀಗೆ ಪಕ್ಷದಲ್ಲಿ ಮೂಲೆಗುಂಪಾಗಿರುವುದಕ್ಕೆ ರೆಡ್ಡಿ ಬೇಸರಗೊಂಡಿದ್ದಾರೆ ಎನ್ನಲಾಗಿದೆ.

ಇನ್ನೊಂದೆಡೆ ತಮ್ಮ ಬಂಧನಕ್ಕೆ ಸಿಎಂ ಕುಮಾರಸ್ವಾಮಿಯವರ ಹನ್ನೆರಡು ವರ್ಷದ ಧ್ವೇಷವೇ ಕಾರಣ ಎಂದು ಜನಾರ್ಧನ ರೆಡ್ಡಿ ಹೇಳಿಕೊಂಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಸಿಎಂ ಕುಮಾರಸ್ವಾಮಿ ನಾನು ಸೇಡಿನ ರಾಜಕೀಯ ಮಾಡಿಲ್ಲ, ಅದರ ಅಗತ್ಯವೂ ನನಗಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ