ಜಾರಕಿಹೊಳಿ ಕಾಂಗ್ರೆಸ್ ಬಿಡಲ್ಲ ಎಂದವರಾರು?

ಮಂಗಳವಾರ, 25 ಡಿಸೆಂಬರ್ 2018 (12:50 IST)
ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರದ ಸಚಿವ ಸಂಪುಟದಿಂದ ಕೈಬಿಟ್ಟ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ. ಹೀಗಂತ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

 ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ರಮೇಶ ಜಾರಕಿಹೊಳಿ ಬೆದರಿಕೆ ಹಾಕಿರುವ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ರಮೇಶ್ ಜಾರಕಿಹೊಳಿ  ರಾಜೀನಾಮೆ ನೀಡುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.

ಪಕ್ಷ ನಿಷ್ಟೆಯಿರುವ ರಮೇಶ್ ರಾಜೀನಾಮೆ ಕೊಡುವುದಿಲ್ಲ ಎಂಬ ಖಾತ್ರಿಯಿದೆ. ಜಾರಕಿಹೊಳಿ ಸಹೋದರರು ಕಾಂಗ್ರೆಸ್ ನಿಷ್ಟಾವಂತರು. ಸಚಿವ ಸ್ಥಾನ ಕಳೆದುಕೊಂಡಿರುವುದರಿಂದಾಗಿ ರಮೇಶ್ ಗೆ ಸ್ವಲ್ಪ ಸಿಟ್ಟು ಬಂದಿರೋದು ಸಹಜ. ಸಿಟ್ಟು ಶಮನಗೊಳ್ಳಲು ಒಂದಷ್ಟು ಸಮಯ ಬೇಕಾಗುತ್ತದೆ. ರಮೇಶ ಜಾರಕಿಹೊಳಿ ರಾಜೀನಾಮೆ ನೀಡುವುದಿಲ್ಲ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ. ಕಾಂಗ್ರೆಸ್ ಪಕ್ಷದಲ್ಲಿವಿಲನ್ಎಂದು ಯಾರನ್ನೂ ಟ್ರೀಟ್ ಮಾಡಿಲ್ಲ ಎಂದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ