ಡಿಕೆಶಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಜಾರಕಿಹೊಳಿ ವೈಯಕ್ತಿಕ ದ್ವೇಷ ತೋರುತ್ತಿದ್ದಾರೆ
ಚುನಾವಣೆ ಸಮೀಪಿಸಿರುವ ಸಂದರ್ಭದಲ್ಲಿ ತಮ್ಮ ನಾಯಕರ ಜತೆ ಷಡ್ಯಂತ್ರ ರೂಪಿಸಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಪ ಮಾಡಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ರಮೇಶ್ ಜಾರಕಿಹೊಳಿ ವಿರುದ್ಧ ಗುಡುಗಿದ್ರು.ಇಂದು ಕೆಪಿಸಿಸಿ ಕಚೇರಿಯಲ್ಲಿಂದು ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ನಿನ್ನೆಯ ಮಾಧ್ಯಮಗೋಷ್ಟಿಯಲ್ಲಿ ರಮೇಶ್ ಜಾರಕಿಹೊಳಿ ಕೇವಲ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿಯಾದ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಕೀಳುಮಟ್ಟದ ಆರೋಪಗಳನ್ನು ಮಾಡಿದ್ದಾರೆ.ರಮೇಶ್ ಜಾರಕಿಹೊಳಿ ಶಿವಕುಮಾರ್ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮೇಲೆ ಇರುವ ವೈಯಕ್ತಿಕ ದ್ವೇಷ, ಹಗೆತನವನ್ನು ತೋರಿಸಿದ್ದಾರೆ ಎಂದು ರಮೇಶ್ ಜಾರಕಿಹೊಳಿ ವಿರುದ್ಧ ಕಿಡಿ ಕಾರಿದ್ರು