ಜವಾದ್ ಚಂಡಮಾರುತದ ಎಫೆಕ್ಟ್: ಕರ್ನಾಟಕದಾದ್ಯಂತ ಡಿಸೆಂಬರ್ 6 ವರೆಗೆ ಭಾರಿ ಮಳೆ

ಶುಕ್ರವಾರ, 3 ಡಿಸೆಂಬರ್ 2021 (15:44 IST)
ಬೆಂಗಳೂರು: ನಾಳೆ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಚ೦ಡಮಾರುತ ಆರ್ಭಟಿಸಲಿದ್ದು, ಇದರ ಪರಿಣಾಮವಾಗಿ ಇಂದಿನಿಂದ 4 ದಿನ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 
 
ಕರ್ನಾಟಕದಾದ್ಯಂತ ಡಿಸೆಂಬರ್ 6 ರವರೆಗೂ ಮಳೆ ಮುಂದುವರಿಯಲಿದ್ದು,  ಇಂದು ಬೆಂಗಳೂರು, ಮೈಸೂರು, ಚಿಕ್ಕಬಳ್ಳಾಪುರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಧಾರವಾಡ. ಬಾಗಲಕೋಟೆ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಹೇಳಿದೆ.  
 
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿ ಜವಾದ್ ಚಂಡಮಾರುತದಿಂದಾಗಿ ಆಂಧ್ರಪ್ರದೇಶ, ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಪ್ರದೇಶಗಳಲ್ಲಿ ಗಾಳಿ ಸಹಿತ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ