ಹೃದಯಾಘಾತ ಇಫೆಕ್ಟ್: ಜಯದೇವ ಆಸ್ಪತ್ರೆಯಲ್ಲಿ ರೋಗಿಗಳ ದಂಡು
ಹಾಸನ ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ದಿನನಿತ್ಯ ಹೃದಯಾಘಾತ ಪ್ರಕರಣಗಳು ಕೇಳಿಬರುತ್ತಿವೆ. ಇದು ಜನರಲ್ಲಿ ಆತಂಕ ಮೂಡಿಸಿದೆ. ಹೀಗಾಗಿ ಸಣ್ಣ ಪುಟ್ಟ ಲಕ್ಷಣಗಳು ಕಂಡುಬಂದ ತಕ್ಷಣ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರೀಕ್ಷಿಸಿಕೊಳ್ಳುತ್ತಿದ್ದಾರೆ.
ಈ ರೀತಿ ಚೆಕ್ ಅಪ್ ಮಾಡಿಸಿಕೊಳ್ಳಲು ಬರುವ ರೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಜಯದೇವ ಆಸ್ಪತ್ರೆಯಲ್ಲಿ ಹೊರರೋಗಿಳ ಸಂಖ್ಯೆ ಹೆಚ್ಚಾಗಿದೆ. ಹೆಚ್ಚುವರಿ ಕೌಂಟರ್ ಗಳನ್ನು ತೆರೆಯಲಾಗಿದೆ. ವೈದ್ಯರೂ ಹೆಚ್ಚುವರಿ ಕೆಲಸ ಮಾಡಬೇಕಾಗುತ್ತಿದೆ.
ಇದರಿಂದಾಗಿ ನಿಜವಾಗಿಯೂ ಹೃದಯದ ಸಮಸ್ಯೆಯಿದ್ದು ಚೆಕ್ ಅಪ್ ಮಾಡಿಸಿಕೊಳ್ಳುವವರಿಗೆ ತೊಂದರೆಯಾಗುತ್ತಿರುವುದಂತೂ ನಿಜ. ಆಸ್ಪತ್ರೆಗೆ ಬರುವವರ ಸಂಖ್ಯೆ ದುಪ್ಪಟ್ಟಾಗಿದೆ.