ಬೆಂಗಳೂರು: ಜಯನಗರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಬಿಜೆಪಿಯ ಪ್ರಹ್ಲಾದ್ ಬಾಬು ವಿರುದ್ಧ ಗೆಲುವು ಸಾಧಿಸಿದ್ದಾರೆ.
ಒಟ್ಟಾರೆ 54,045 ಮತಗಳನ್ನು ಪಡೆದ ಸೌಮ್ಯಾ ರೆಡ್ಡಿ ಬಿಜೆಪಿಯ ಪ್ರಹ್ಲಾದ್ ಬಾಬು ವಿರುದ್ಧ 3,775 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಪ್ರಹ್ಲಾದ್ ಬಾಬುಗೆ 50,270 ಮತಗಳು ಬಂದಿವೆ.
ಪಕ್ಷೇತರರಾಗಿ ಸ್ಪರ್ಧಿಸಿದ್ದ ರವಿಕೃಷ್ಣಾ ರೆಡ್ಡಿ 1,591 ಮತಗಳನ್ನಷ್ಟೇ ಪಡೆದಿದ್ದಾರೆ. ಇದರೊಂದಿಗೆ ಶಾಸಕ ರಾಮಲಿಂಗಾ ರೆಡ್ಡಿ ಪುತ್ರಿ ಮೊದಲ ಚುನಾವಣೆಯಲ್ಲೇ ಗೆಲುವಿನ ನಗೆ ಬೀರಿದ್ದು, ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರಕ್ಕೆ ನೈತಿಕ ಗೆಲುವು ತಂದುಕೊಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.