ಜೆಡಿಎಸ್ ಸರಕಾರದ ವಿರುದ್ಧವೇ ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ

ಮಂಗಳವಾರ, 5 ಜೂನ್ 2018 (18:58 IST)
ಈರುಳ್ಳಿ ಬೆಲೆ‌ ಕುಸಿತ ಹಿನ್ನೆಲೆ, ಅದಕ್ಕೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿದರು. 
ವಿಜಯಪುರ ನಗರದ ಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಯನ್ನು  ಜೆಡಿಎಸ್ ಕಾರ್ಯಕರ್ತರು ನಡೆಸಿದರು.
 
 ಮಾಜಿ ಸಚಿವ, ಜೆಡಿಎಸ್ ಮುಖಂಡ ಎಸ್ ಕೆ ಬೆಳ್ಳುಬ್ಬಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಗಾಂಧಿವೃತ್ತದಲ್ಲಿ ರಸ್ತೆಗೆ ಈರುಳ್ಳಿ ಸುರಿದು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. 
 
ಇನ್ನು ಈರುಳ್ಳಿಗೆ 1800 ರೂಪಾಯಿ ಬೆಂಬಲ ಬೆಲೆ ನೀಡುವಂತೆ ಪ್ರತಿಭಟನಾಕಾರರ ಆಗ್ರಹಿಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ