ಕೇಂದ್ರ ಸಚಿವ ಅನಂತಕುಮಾರ್‌ಗೆ ಪುಟಗೋಸಿ ಕಳಿಸಿದ ಜೆಡಿಎಸ್ ಕಾರ್ಯಕರ್ತರು
ಸೋಮವಾರ, 4 ಜೂನ್ 2018 (19:45 IST)
ಜೆಡಿಎಸ್ ಪುಟಗೋಸಿ ಪಕ್ಷ ಎಂದಿದ್ದ ಕೇಂದ್ರ ಸಚಿವ ಅನಂತಕುಮಾರ ಹೆಗ್ಡೆ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಕೇಂದ್ರ ಸಚಿವ ಅನಂತ ಕುಮಾರ್ ಹೆಗ್ಡೆ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿ ಜೆಡಿಎಸ್ ಕಾರ್ಯಕರ್ತರಿಂದ ಪುಟಗೋಸಿ ರವಾನೆ ಮಾಡಲಾಗಿದೆ. ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿಭಿನ್ನ ಪ್ರತಿಭಟನೆ ನಡೆಸಲಾಗಿದೆ.
ಜೆಡಿಎಸ್ ಪುಟಗೋಸಿ ಪಕ್ಷ ಎಂದಿದ್ದ ಅನಂತಕುಮಾರ ಹೆಗ್ಡೆ ವಿರುದ್ಧ ಜೆಡಿಎಸ್ ಕಾರ್ಯಕರ್ತರು ವಿಭಿನ್ನ ವಾಗಿ ಟಾಂಗ್ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೋಸ್ಟ್ ಮೂಲಕ ಪುಟಗೋಸಿ ರವಾನಿಸಿದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನು ಮುಂದೆ ಜೆಡಿಎಸ್ ಬಗ್ಗೆ ಮಾತನಾಡುವಾಗ ಎಚ್ಚರವಿರಲಿ ಎಂದು ಎಚ್ಚರಿಕೆಯನ್ನು ಜೆಡಿಎಸ್ ಕಾರ್ಯಕರ್ತರು ನೀಡಿದ್ದಾರೆ.