ಜೆಡಿಎಸ್‌ನಲ್ಲೂ ಸ್ಟಾರ್ ಕ್ಯಾಂಪೇನರ್ ಇದ್ದಾರೆ : ದೇವೇಗೌಡ

ಬುಧವಾರ, 26 ಏಪ್ರಿಲ್ 2023 (11:22 IST)
ಮೈಸೂರು : ನಮ್ಮಲ್ಲೂ ಸ್ಟಾರ್ ಕ್ಯಾಂಪೇನರ್ ಇದ್ದಾರೆ. ರೇವಣ್ಣ, ಪುಟ್ಟರಾಜು, ಜಿಟಿ ದೇವೇಗೌಡ ಸೇರಿದಂತೆ ಹಲವರಿದ್ದಾರೆ ಎಂದು ಮಾಜಿ ಪ್ರಧಾನಮಂತ್ರಿ ಹೆಚ್ಡಿ ದೇವೇಗೌಡ ಹೇಳಿದ್ದಾರೆ.
 
ಪಿರಿಯಾಪಟ್ಟಣದಲ್ಲಿ ಮಾತಾನಾಡಿದ ಅವರು, ರಾಜ್ಯದ ಅವರವರ ಭಾಗದಲ್ಲಿ ಜೆಡಿಎಸ್ ಗೆಲುವಿಗೆ ಶ್ರಮಿಸಲಿದ್ದಾರೆ. ಪಕ್ಷದ ಮುಖಂಡರು ಒಗ್ಗಟ್ಟಾಗಿ ಕೆಲಸ ಮಾಡಲಿದ್ದಾರೆ.

ಪಂಚರತ್ನ ಯೋಜನೆ ಜನರಿಗೆ ಸಹಕಾರಿ ಆಗಲಿದೆ. ಕೊಟ್ಟ ಮಾತು ಉಳಿಸಿಕೊಂಡಿರುವ ಕುಮಾರಸ್ವಾಮಿ ಬಗ್ಗೆ ಜನರಿಗೆ ವಿಶ್ವಾಸ ಇದೆ. ಜೆಡಿಎಸ್ ಬಹುಮತ ಪಡೆದು ಸ್ವತಂತ್ರ ಸರ್ಕಾರ ರಚನೆ ಮಾಡಲಿದೆ. ಎಂದು ಮಾಜಿ ಪ್ರಧಾನಿ ದೇವೇಗೌಡ ತಿಳಿಸಿದರು.

ಚುನಾವಣೆ ಮುಗಿಯುವವರೆಗೂ ಪ್ರತಿದಿನ 3 ಕಡೆ ಪ್ರಚಾರ ಮಾಡುತ್ತೇನೆ. ಒಟ್ಟು 42 ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತೇನೆ. ರಾಜ್ಯದ ಎಲ್ಲಾ ಭಾಗಗಳಿಗೂ ತೆರಳಿ ಪ್ರಚಾರ ಮಾಡುತ್ತೇನೆ. ರಾಯಚೂರು, ವಿಜಯಪುರ ಭಾಗಗಳಿಗೆ ನೀರು ಕೊಟ್ಟಿದ್ದೇನೆ. ಕೇವಲ ಹಳೆ ಮೈಸೂರು ಅನ್ನೋ ಪ್ರಶ್ನೆಯೇ ಇಲ್ಲ. ಎಲ್ಲಾ ಕಡೆ ಹೋಗುತ್ತೇನೆ ಎಂದು ಹೇಳಿದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ