ದೇವೇಗೌಡರು ಪಕ್ಷವನ್ನು ಬೇರುಮಟ್ಟದಿಂದ ಬಲಪಡಿಸಲು ಶ್ರಮಿಸಬೇಕು: ಹೊರಟ್ಟಿ

ಶನಿವಾರ, 18 ಜೂನ್ 2016 (12:02 IST)
ಬಂಡಾಯ ಶಾಸಕರ ವರ್ತನೆಯಿಂದ ಕೆಳಹಂತದ ಕಾರ್ಯಕರ್ತರಿಗೆ ತೊಂದರೆಯಾಗುತ್ತಿರುವುದರಿಂದ ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡರು, ಪ್ರತಿಯೊಂದು ಜಿಲ್ಲೆಗೆ ತೆರಳಿ ಪಕ್ಷವನ್ನು ಸಂಘಟಿಸುವತ್ತ ಗಮನಹರಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.  
 
ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಳಿಕೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದರೆ, ಪ್ರತಿಯೊಂದು ಗ್ರಾಮ ಮಟ್ಟದಿಂದ ರಾಜ್ಯಮಟ್ಟದವರೆಗೆ ಪಕ್ಷವನ್ನು ಬಲಪಡಿಸುವುದು ಅಗತ್ಯ ಮ್ತು ಅನಿವಾರ್ಯವಾಗಿದೆ ಎಂದರು.
 
ಬಂಡಾಯ ಶಾಸಕ ಜಮೀರ್ ಅಹ್ಮದ್ ಮತ್ತು ಅವರ ತಂಡದವರು ಕುಮಾರಸ್ವಾಮಿ ಅವರೊಂದಿಗೆ ಚೆನ್ನಾಗಿಯೇ ಇದ್ದರು. ಆದರೆ ಏನಾಯತು ಗೊತ್ತಿಲ್ಲ.ಬಂಡಾಯದ ರಣಕಹಳೆ ಮೊಳಗಿಸಿದರು ಎಂದು ವಿಷಾದ ವ್ಯಕ್ತಪಡಿಸಿದರು.
 
ನನ್ನನ್ನು ಸೋಲಿಸಲು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮತ್ತು ಪ್ರಹ್ಲಾದ್ ಜೋಶಿ ಹರಸಾಹಸ ಪಟ್ಟರು. ಆದರೆ, ಶಿಕ್ಷಕರು ನನ್ನಮೇಲೆ ಇಟ್ಟಿರುವ ವಿಶ್ವಾಸದಿಂದ ಗೆಲುವು ಸಾಧಿಸಿದ್ದೇನೆ.7ನೇ ಬಾರಿಗೆ ಆಯ್ಕೆ ಮಾಡಿದ್ದಕ್ಕೆ ಶಿಕ್ಷಕ್ಷರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ