ಜೆಡಿಎಸ್-ಕಾಂಗ್ರೆಸ್ ಟಿಕೆಟ್ ಹೊಂದಾಣಿಕೆ ಮಾಡಿಕೊಳ್ಳಲು ಮನವಿ

ಮಂಗಳವಾರ, 27 ಮಾರ್ಚ್ 2018 (09:48 IST)
ಬೆಂಗಳೂರು: ರಾಹುಲ್ ಗಾಂಧಿ ಬಿ ಟೀಂ ಟೀಕೆಯ ನಂತರ ಒಂದೆಡೆ ಜೆಡಿಎಸ್ ಮತ್ತು ಕಾಂಗ್ರೆಸ್ ಪರಸ್ಪರ ಕೆಸರೆರಚಾಟ ಮಾಡುತ್ತಿದ್ದರೆ ಇನ್ನೊಂದೆಡೆ ಇದೇ ಎರಡು ಪಕ್ಷಗಳು ಟಿಕೆಟ್ ಹಂಚಿಕೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕೆಂದು ಸಂವಿಧಾನ ಉಳಿವಿಗಾಗಿ ಕರ್ನಾಟಕ ಸಂಘ ಮನವಿ ಮಾಡಿದೆ.
 

ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರನ್ನು ಭೇಟಿ ಮಾಡಿದ ಸಂಘಟನೆ, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಾರದಂತೆ ತಡೆಯಲು ಜೆಡಿಎಸ್-ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಳ್ಳಬೇಕು. ಮತ ವಿಭಜನೆಯಾಗದಂತೆ ಪ್ಲ್ಯಾನ್ ಮಾಡಬೇಕು ಎಂದು ಮನವಿ ಮಾಡಿದೆ.

ಒಂದು ವೇಳೆ ಅತಂತ್ರ ಸ್ಥಿತಿ ನಿರ್ಮಾಣವಾದರೆ ಕಾಂಗ್ರೆಸ್ ಜತೆ ಜೆಡಿಎಸ್ ಕೈ ಜೋಡಿಸಿ ಸರ್ಕಾರ ರಚಿಸಬೇಕು. ಸಮ್ಮಿಶ್ರ ಸರ್ಕಾರ ರೂಪಿಸುವುದಿದ್ದರೆ ಬಿಜೆಪಿ ಜತೆ ಕೈ ಜೋಡಿಸಬಾರದು ಎಂದು ಸಂಘಟನೆ ದೇವೇಗೌಡರಿಗೆ ಮನವಿ ಸಲ್ಲಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ