ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರೋ ಜೆಡಿಎಸ್ ನ ಮೂವರ ಶಾಸಕರನ್ನ ಅನರ್ಹಗೊಳಿಸುವಂತೆ ಜೆಡಿಎಸ್ ಸ್ಪೀಕರ್ ಗೆ ದೂರು ಸಲ್ಲಿಸಿದೆ.
ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರೋ ಜೆಡಿಎಸ್ ನ ಮೂವರ ವಿರುದ್ಧ ಪಕ್ಷ ಗಂಭೀರ ಕ್ರಮಕ್ಕೆ ಮುಂದಾಗಿದೆ.
ಜೆಡಿಎಸ್ ನ ಮೂವರು ಶಾಸಕರ ಅನರ್ಹತೆಗೆ ಕೋರಿ ಸ್ಪೀಕರ್ ಅವರಿಗೆ ಜೆಡಿಎಸ್ ನಾಯಕರು ದೂರು ಸಲ್ಲಿಕೆ ಮಾಡಿದ್ದಾರೆ.
ಜೆಡಿಎಸ್ ಪರ ವಕೀಲ, ವಕೀಲರ ಸಂಘದ ಅಧ್ಯಕ್ಷ ರಂಗನಾಥ್ ಅವರು ಸ್ಪೀಕರ್ ಕಚೇರಿ ಆಗಮಿಸಿದರು. ಹುಣಸೂರು ಶಾಸಕ ಹೆಚ್.ವಿಶ್ವನಾಥ್, ಕೆಆರ್ ಪೇಟೆ ಶಾಸಕ ನಾರಾಯಣ ಗೌಡ ಹಾಗೂ ಮಹಾಲಕ್ಷ್ಮೀ ಲೇಔಟ್ ಗೋಪಾಲಯ್ಯ ವಿರುದ್ಧ ದೂರು ಸಲ್ಲಿಸಲಾಗಿದೆ.
ಮಾಜಿ ಶಾಸಕ ಕೋನರೆಡ್ಡಿ, ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಮತ್ತಿತರರು ದೂರು ಸಲ್ಲಿಸುವ ವೇಳೆ ಇದ್ದರು.