ಬೆಂಗಳೂರು : ವಿಧಾನಸೌಧದಲ್ಲಿ ನಮಾಜ್ ಮಾಡಲು ಅವಕಾಶ ಮಾಡಿಕೊಡಿ ಎಂದು ಜೆಡಿಎಸ್ ಪರಿಷತ್ ಸದಸ್ಯ ಫಾರೂಕ್ ಒತ್ತಾಯ ಮಾಡಿದ್ದಾರೆ.
ವಿಧಾನಸೌಧದಲ್ಲಿ ನಮಗೆ ನಮಾಜ್ಗೆ ಕೊಠಡಿ ವ್ಯವಸ್ಥೆ ಮಾಡಿಕೊಡಿ ಎಂದು ವಿಧಾನ ಪರಿಷತ್ನಲ್ಲಿ ಸಭಾಪತಿಗಳ ಗಮನಕ್ಕೆ ತಂದಿದ್ದಾರೆ.
ಈ ವೇಳೆ ಪ್ರತಿಕ್ರಿಯಿಸಿದ ಸಚಿವ ಹೆಚ್.ಕೆ ಪಾಟೀಲ್, ಸಭಾದ್ಯಕ್ಷರ ಕೊಠಡಿಯಲ್ಲಿ ಸಭೆ ಕರೆದ ವೇಳೆ ನಾಯಕರ ಮಾತುಗಳನ್ನು ಕೇಳಿ, ಅಧ್ಯಕ್ಷರು ಏನು ಅಪೇಕ್ಷೆ ಮಾಡುತ್ತಾರೆ ಎಂದು ಒಂದು ನಿರ್ಣಯ ಮಾಡಲು ಸರ್ಕಾರ ತೀರ್ಮಾನಿಸುತ್ತದೆ ಎಂದರು.