ಹೋರಾಟಗಾರರು ಕುಡಿಯಲು ನೀರು ಕೇಳುತ್ತಿದ್ದಾರೆ. ಆದರೆ, ಕೇಂದ್ರ ಸರಕಾರ ರಾಜ್ಯದ ಜನತೆಗೆ ವಿಷ ನೀಡಿದೆ. ನನ್ನ ರಾಜಕೀಯ ಜೀವನದಲ್ಲಿ ಇಂತಹ ಸ್ಥಿತಿ ನೋಡಿರಲಿಲ್ಲ. ನೀರಿಗಾಗಿ ಹೋರಾಟ ಮಾಡುವ ರೈತರ ಮೇಲೆ ಹಲ್ಲೆ ಮಾಡುವುದನ್ನು ನಿಲ್ಲಿಸಿ. ಬೇಕಾದರೆ ನನ್ನ ಮೇಲೆ ಹಲ್ಲೆ ಮಾಡಿ. ನನ್ನ ಜೀವವನ್ನು ತ್ಯಾಗ ಮಾಡಲು ಸಿದ್ಧ ಎಂದು ತಿಳಿಸಿದ್ದಾರೆ.