ದೇವೇಂದ್ರ ಫಡ್ನವೀಸ್ ವಿರುದ್ಧ ವಾಗ್ದಾಳಿ ನಡೆಸಿದ ಜೆಡಿಎಸ್ ಶಾಸಕ

ಮಂಗಳವಾರ, 3 ಡಿಸೆಂಬರ್ 2019 (06:50 IST)
ಮೈಸೂರು : ಅಧಿಕಾರ ಕಳೆದುಕೊಂಡ ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರ ವಿರುದ್ಧ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಾಗ್ದಾಳಿ ನಡೆಸಿದ್ದಾರೆ.


ಹುಣಸೂರಿನಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಅನರ್ಹ ಶಾಸಕರು ಕುಮಾರಸ್ವಾಮಿ ಸರ್ಕಾರ ಬೀಳಿಸಿ ಅವರಿಗೆ ಅನ್ಯಾಯ ಮಾಡಿದ್ದಾರೆ. ರಾಜೀನಾಮೆ ನೀಡಿ ಮುಂಬೈಗೆ ಹೋಗಿ ಕುಳಿತುಕೊಂಡಿದ್ದಾರೆ. ನಾವು ಮುಂಬೈಗೆ ಹೋದಾಗ ಅಂದು ಸಿಎಂ ಆಗಿದ್ದ ದೇವೇಂದ್ರ ಫಡ್ನವೀಸ್ ನಮ್ಮನ್ನು ಹೋಟೆಲ್ ಒಳಗೆ ಬಿಡದೆ ರಸ್ತೆಯಲ್ಲಿ ನಿಲ್ಲುವಂತೆ ಮಾಡಿದ್ದಾರೆ. ಅಂದು ಅವರಿಗೆ ಸಹಾಯ ಮಾಡಿ ನಮಗೆ ಅನ್ಯಾಯ ಮಾಡಿದ ಶಾಪದಿಂದ ಅವರು ಇಂದು ಅಧಿಕಾರ ಕಳೆದುಕೊಂಡಿದ್ದಾರೆ ಎಂದು ಕಿಡಿಕಾರಿದ್ದಾರೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ