ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಜೆಡಿಎಸ್ ಸಂಸದ

ಶುಕ್ರವಾರ, 19 ಮೇ 2017 (13:04 IST)
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ನಾಯಕರನ್ನು ಟೀಕಿಸುತ್ತಿರುವಾಗಲೇ ಪಕ್ಷದ ಸಂಸದನೊಬ್ಬ ಪ್ರಧಾನಿ ಮೋದಿಯನ್ನು ಹೊಗಳಿ ಅಚ್ಚರಿ ಮೂಡಿಸಿದ್ದಾರೆ.
 
ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಸಂಸದ ಸಿ.ಎಸ್. ಪುಟ್ಟರಾಜು, ಪಾಂಡವಪುರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿ, ನರೇಂದ್ರ ಮೋದಿ ಪ್ರಧಾನಿಯಾದ ನಂತರ ದೇವೇಗೌಡರೊಂದಿಗೆ ದೆಹಲಿಗೆ ತೆರಳಿ ಅವರನ್ನು ಭೇಟಿಯಾಗಿದ್ದೆ. ಆವಾಗ ಅವರು ನನ್ನ ಬಗ್ಗೆ ಮಾತನಾಡಿರುವುದು ಕಂಡು ಅದು ನನ್ನ ಭಾಗ್ಯ ಎನ್ನಿಸಿತು ಎಂದು ಸಂತಸ ವ್ಯಕ್ತಪಡಿಸಿದರು.   
 
ಕಾಲರ್ ಪಟ್ಟಿ ಮೇಲೆತ್ತಿ ನಾವು ಭಾರತೀಯರು ಎಂದು ವಿದೇಶದಲ್ಲಿರುವ ಭಾರತೀಯರು ಹೇಳುತ್ತಿದ್ದಾರೆ. ಇದಕ್ಕೆ ಕಾರಣ ಕೇಂದ್ರದಲ್ಲಿರುವ ದಕ್ಷ ಸರಕಾರ. ಇರುವುದನ್ನು ಹೇಳುವುದರಲ್ಲಿ ಯಾವುದೇ ಅಭ್ಯಂತರವಿಲ್ಲ. ನಾವು ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. 
 
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಸಮ್ಮುಖದಲ್ಲಿ ಜೆಡಿಎಸ್ ಸಂಸದ ಪುಟ್ಟರಾಜು, ಪ್ರಧಾನಿ ಮೋದಿಯನ್ನು ಹೊಗಳುತ್ತಿರುವುದು ಕಂಡ ಜೆಡಿಎಸ್ ನಾಯಕರು ಇವರೇನು ಜೆಡಿಎಸ್ ಸಂಸದರೋ ಅಥವಾ ಬಿಜೆಪಿ ಸಂಸದರೋ ಎನ್ನುವ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ