ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಕುರಿತು ಟೀಕಿಸುವ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಸ್ಥಾನ ಸಿಗಲಿಲ್ಲ ಎಂದು ಜೆಡಿಎಸ್ ಪಕ್ಷಕ್ಕೆ ದೋಖಾ ಮಾಡಿದ್ದನ್ನು ನೆನಪಿಸಿಕೊಳ್ಳಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಲಿತ ಪರ ಎಂದು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ, ದಲಿತ ಸಮುದಾಯದ ಅಭಿವೃದ್ಧಿಗೆ ಏಷ್ಟು ಖರ್ಚು ಮಾಡಿದ್ದಾರೆ ಸಾರ್ವಜನಿಕವಾಗಿ ಬಹಿರಂಗ ಪಡಿಸಲಿ ಎಂದು ಹೇಳಿದರು.