ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಜೆಡಿಎಸ್ ಬಂಡಾಯ ಶಾಸಕ ಬಾಲಕೃಷ್ಣ ಹಲ್ಲೆ ಮಾಡಿರುವ ಘಟನೆ ರಾಮನಗರದ ಮಾಗಡಿಯಲ್ಲಿ ವರದಿಯಾಗಿದೆ.
ಮಾಗಡಿ ಪುರಸಭೆ ಹಿಂದಿನ ಮಾರ್ಕೆಟ್ ತೆರವು ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ. ಮಾರಕಟ್ಟೆಯನ್ನು ತೆರವುಗೊಳಿಸುವಂತೆ ಪಟ್ಟು ಹಿಡಿದಿರುವ ಶಾಸಕ ಬಾಲಕೃಷ್ಣ, ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ವ್ಯಾಪಾರಿಗಳ ತರಕಾರಿಗಳನ್ನು ಬೀದಿಗೆಸೆದ ಘಟನೆಯೂ ನಡೆಯಿತು.
ಸಚಿವ ಎ.ಮಂಜು ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡುವವರೆಗೂ ಮಾರುಕಟ್ಟೆ ತೆರವುಗೊಳಿಸಲು ಬಿಡುವುದಿಲ್ಲ ಎಂದು ಆಗ್ರಹಿಸಿದ್ದಾರೆ.
ಗಂಡ-ಹೆಂಡತಿ ನಡುವಿನ ಜಗಳದಲ್ಲಿ ಕುಸೂ ಬಡವಾಯ್ತು ಎಂಬಂತೆ ಈ ಇಬ್ಬರು ರಾಜಕೀಯ ನಾಯಕರ ನಡುವಿನ ಗಲಾಟೆಯ ಮಧ್ಯ ಹೊಟ್ಟೆ ಪಾಡಿಗಾಗಿ ದುಡಿಯುವ ಅಮಾಯಕ ವ್ಯಾಪಾರಿಗಳು ತೊಂದರೆ ಅನುಭವಿಸುವಂತಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ