ಬಿಬಿಎಂಪಿ ಚುನಾವಣೆ: ಮತ್ತೆ ಕುಮಾರಸ್ವಾಮಿ ಪಾಳಯದಲ್ಲಿ ಜೆಡಿಎಸ್ ರೆಬೆಲ್ ಶಾಸಕರು..

ಶುಕ್ರವಾರ, 16 ಸೆಪ್ಟಂಬರ್ 2016 (15:31 IST)
ಬಿಬಿಎಂಪಿಯಲ್ಲಿ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಬಂಡಾಯದ ಪ್ರಶ್ನೆಯೇ ಇಲ್ಲ. ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಕುರಿತು ಮಾತನಾಡಲ್ಲ ಎಂದು ಜೆಡಿಎಸ್ ರೆಬಲ್ ಶಾಸಕ ಚೆಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ.
 
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಮೇಯರ್ ಚುನಾವಣೆಯಲ್ಲಿ ಮೈತ್ರಿ ಕುರಿತು ಈಗಾಗಲೇ ಜೆಡಿಎಸ್ ವರಿಷ್ಠ ಎಚ್‌.ಡಿ.ದೇದೇಗೌಡರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಮುಂದೆ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಕಾದು ನೋಡಬೇಕು ಎಂದು ಹೇಳಿದರು.
 
ಕಾವೇರಿ ವಿವಾದ......
 
ಕಾವೇರಿ ನದಿ ನೀರು ಹೋರಾಟದಲ್ಲಿ ಬಂಧನಕ್ಕೊಳಗಾಗಿರುವ ಹೋರಾಟಗಾರರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.
 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನೀರಾವರಿ, ಭೂಗರ್ಭತಜ್ಞರು, ಗಣಿ ಸೇರಿದಂತೆ 8 ಜನರ ಸಮಿತಿಯನ್ನು ರಚಿಸಬೇಕು. ಅದರಲ್ಲಿ 60 ಪ್ರತಿಶತ ಯುವಕರಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ