ಸಿಎಂ ನಿವಾಸಕ್ಕೆ ಜೆಡಿಎಸ್ ಬಂಡಾಯ ಶಾಸಕರ ಭೇಟಿ

ಮಂಗಳವಾರ, 28 ಮಾರ್ಚ್ 2017 (20:50 IST)
ಜೆಡಿಎಸ್ ಪಕ್ಷದ ಬಂಡಾಯ ಶಾಸಕರಾದ ಜಮೀರ್ ಅಹ್ಮದ್ ಖಾನ್, ಚಲುವರಾಯ ಸ್ವಾಮಿ ಸೇರಿದಂತೆ ಇತರ ಶಾಸಕರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
 
ವಿಧಾನಸಭೆ ಕಲಾಪ ಮುಗುಯುತ್ತಿದ್ದಂತೆ ನೇರವಾಗಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ಶಾಸಕರು, ಪಕ್ಷ ಸೇರ್ಪಡೆ ಕುರಿತಂತೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಖಚಿತವಾದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ ಕೂಡಾ ಹಸಿರು ನಿಶಾನೆ ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ