ರಾಜ್ಯದ ರೈತರಿಗೆ ವಂಚಿಸಿದ ತನ್ನ ಸಂಬಂಧಿಕರ ಪರ ನಿಂತ ಜಮೀರ್ ಅಹ್ಮದ್: ನಾಚಿಕೆಯಾಗ್ಬೇಕು ಎಂದ ಜೆಡಿಎಸ್

Krishnaveni K

ಶನಿವಾರ, 25 ಅಕ್ಟೋಬರ್ 2025 (14:12 IST)
ಬೆಂಗಳೂರು: ರಾಜ್ಯದ ರೈತರಿಗೆ ವಂಚನೆ ಮಾಡಿದ ತೆಲಂಗಾಣದ ವ್ಯಾಪಾರಿಗಳ ಪರವಾಗಿ ನಿಂತ ಆರೋಪದಲ್ಲಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಜೆಡಿಎಸ್ ವಾಗ್ದಾಳಿ ನಡೆಸಿದೆ.

ರಾಜ್ಯದ ರೈತರಿಗೆ ವಂಚಿಸಿದ ತೆಲಂಗಾಣದ ವ್ಯಾಪಾರಿಗಳು ಜಮೀರ್ ಅಹ್ಮದ್ ಸಂಬಂಧಿಕರು. ಈ ಕಾರಣಕ್ಕೆ ಪೊಲೀಸರಿಗೆ ಕರೆ ಮಾಡಿ ಕೇಸ್ ಸೆಟಲ್ ಮಾಡಿ ಎಂದು ಸಚಿವರೇ ಸೂಚಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.

ಈ ಬಗ್ಗೆ ಜೆಡಿಎಸ್ ಎಕ್ಸ್ ಪುಟದಲ್ಲಿ ತೀವ್ರ ವಾಗ್ದಾಳಿ ನಡೆಸಿದೆ. ‘ಕರ್ನಾಟಕದ ಅನ್ನ ತಿಂದು, ಕನ್ನಡಿಗರ ಮತ ಪಡೆದು ಕನ್ನಡಿಗರಿಗೆ ದ್ರೋಹ ಬಗೆಯುವ ಸಚಿವ ಜಮೀರ್ ಅಹ್ಮದ್ ನಿಮಗೆ ನಾಚಿಕೆಯಾಗಬೇಕು !

ರಾಜ್ಯದ ರೈತರಿಗೆ ವಂಚಿಸಿರುವ ನಿಮ್ಮ ಸಂಬಂಧಿಕರ ಪರವಾಗಿ ಸಹಾಯ ಮಾಡುವಂತೆ ಪೊಲೀಸ್‌ ಅಧಿಕಾರಿಗೆ ಫೋನ್‌ ಮಾಡಿ ಶಿಫಾರಸ್ಸು ಮಾಡಿರುವುದು ಅಕ್ಷಮ್ಯ. ರಾಜ್ಯದ ಜವಾಬ್ದಾರಿಯುತ ಸಚಿವರಾಗಿ ವಂಚಕರ ಪರ ವಹಿಸಿ, ರಾಜ್ಯದ ರೈತರಿಗೆ ಮೋಸ ಮಾಡಲು ಆತ್ಮಸಾಕ್ಷಿ ಹೇಗೆ ಒಪ್ಪುತ್ತದೆ ?

ಗೃಹ ಸಚಿವ ಜಿ ಪರಮೇಶ್ವರ್ ಅವರೇ, ರಾಜ್ಯದಲ್ಲಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯಕೊಡಿಸುವುದನ್ನು ಬಿಟ್ಟು ಪೊಲೀಸ್‌ ಇಲಾಖೆ ಸೆಟಲ್‌ಮೆಂಟ್‌ ಕೇಂದ್ರಗಳಾಗಿವೆ ಎಂಬುದಕ್ಕೆ ಈ ಪ್ರಕರಣ ಉದಾಹರಣೆಯಾಗಿದೆ.

ಸಿಎಂ ಸಿದ್ದರಾಮಯ್ಯ ಅವರೇ, ಸದಾ ರೌಡಿಗಳು ಹಾಗೂ ವಂಚಕರ ಪರ ವಹಿಸುವ ಸೆಟಲ್‌ಮೆಂಟ್‌ ಸಚಿವ ಜಮೀರ್‌ ಅವರನ್ನು ಸಂಪುಟದಿಂದ ವಜಾ ಮಾಡಿ. ನಿಮ್ಮ ನೈತಿಕತೆ ಪ್ರದರ್ಶಿಸಿ’ ಎಂದು ವಾಗ್ದಾಳಿ ನಡೆಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ