ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯಿಂದ 500 ಕೋಟಿ ರೂಪಾಯಿ ಬಾಂಬ್
ಗುರುವಾರ, 23 ಮಾರ್ಚ್ 2017 (18:10 IST)
ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿ ಪಕ್ಷಕ್ಕೆ 500 ಕೋಟಿ ರೂ ನೀಡುವ ಕಂಡೀಶನ್ ಮೇಲೆ ಅವರ ಆಸ್ತಿಯನ್ನು ವಾಪಸ್ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ಜನಾರ್ದನ ರೆಡ್ಡಿಯ ಹಣದ ಪ್ರಭಾವದಿಂದ ಪಕ್ಷವನ್ನು ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ತರುವ ಉದ್ದೇಶದಿಂದ ರೆಡ್ಡಿಯ 840 ಕೋಟಿ ರೂಪಾಯಿ ಆಸ್ತಿಯನ್ನು ಮರುಳಿಸಲಾಗಿದೆ ಎಂದು ಕಿಡಿಕಾರಿದ್ದಾರೆ.
ಇತ್ತೀಚೆಗೆ ಅಷ್ಟೇ ಜಾರಿ ನಿರ್ದೇಶನಾಲಯದ ರೆಡ್ಡಿ ವಿರುದ್ಧದ 900 ಕೋಟಿ ಆಸ್ತಿ ಪ್ರಕರಣವನ್ನ ರದ್ದು ಮಾಡಿತ್ತು. ಇದೀಗ ಕುಮಾರಸ್ವಾಮಿ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿದೆ.
ಅಕ್ರಮ ಗಣಿಗಾರಿಕೆಯಲ್ಲಿ ಆರೋಪಿಯಾಗಿರುವ ಜನಾರ್ದನ ರೆಡ್ಡಿ ಭಾಗಿಯಾಗಿದ್ದ ಬೇಲೇಕೇರಿ ಅದಿರು ಪ್ರಕರಣಕ್ಕೆ ಸಿಎಂ ಸಿದ್ದರಾಮಯ್ಯ ಸರಕಾರ ಎಳ್ಳು ನೀರು ಬಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಪರಿಶ್ರಮದಿಂದ ತಯಾರಿಸಲಾದ ವರದಿಗೆ ಸರಕಾರ ಕಿಂಚಿತ್ತು ಕೂಡ ಬೆಲೆ ಕೊಡದಿರುವುದು ಸಿಎಂ ಸಿದ್ದರಾಮಯ್ಯರ ಸರಕಾರಕ್ಕೆ ನಾಚಿಕೆಗೇಡಿತನದ ಸಂಗತಿಯಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.