ಜೆಡಿಎಸ್ ರಾಜ್ಯಾಧ್ಯಕ್ಷ, ತುಮಕೂರು ಅಭ್ಯರ್ಥಿ ಎ.ಕೃಷ್ಣಪ್ಪ ವಿಧಿವಶ

ಬುಧವಾರ, 23 ಏಪ್ರಿಲ್ 2014 (20:21 IST)
ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎ.ಕೃಷ್ಣಪ್ಪ ವಿಧಿವಶರಾಗಿದ್ದಾರೆ.  ತೀವ್ರ ಹೃದಯಾಘಾತಕ್ಕೊಳಗಾದ ಅವರನ್ನು .ಕೆ. ಆರ್. ಪುರಂ ಸೂಪರ್ ಸ್ಷೆಷಾಲಿಟಿ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ   ಇಂದು ಸಂಜೆ ವಿಧಿವಶರಾಗಿದ್ದಾರೆ.


 ಕೃಷ್ಣಪ್ಪ ಅವರಿಗೆ 68 ವರ್ಷ ವಯಸ್ಸಾಗಿತ್ತು. ಕೃಷ್ಣಪ್ಪ ತುಮಕೂರು ಲೋಕಸಭೆ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಚುನಾವಣೆ ಕಣಕ್ಕೆ ಇಳಿದಿದ್ದ ಕೃಷ್ಣಪ್ಪ ಅವರು ಲೋಕಸಭೆ ಚುನಾವಣೆ ಫಲಿತಾಂಶ ಬರುವುದಕ್ಕೆ ಮುನ್ನವೇ ಅಸುನೀಗಿದ್ದಾರೆ.

ಚುನಾವಣೆಯಲ್ಲಿ ಮನೆ, ಮನೆಗೆ ತಿರುಗಿ ವ್ಯಾಪಕ ಚುನಾವಣೆ ಪ್ರಚಾರವನ್ನು ಅವರು ಮಾಡಿದ್ದರು. ಕಾಂಗ್ರೆಸ್‌ನಿಂದ ಗೆದ್ದು ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದ ಕೃಷ್ಣಪ್ಪ ಅವರಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ್ದರಿಂದ ಈ ಧೋರಣೆಯಿಂದ ಬೇಸತ್ತು ಜೆಡಿಎಸ್ ಪಕ್ಷಕ್ಕೆ ಸೇರಿದ್ದರು. ಚಿತ್ರದುರ್ಗದ ಹಿರಿಯೂರಿನಲ್ಲಿ ಜನಿಸಿದ್ದ ಕೃಷ್ಣಪ್ಪ ಕಾರ್ಮಿಕ ನಾಯಕರಾಗಿ ಬೆಳೆದು ಶಾಸಕರಾಗಿ, ಎಸ್. ಎಂ.ಕೃಷ್ಣ ಸಚಿವ ಸಂಪುಟದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಸಾಮಾನ್ಯ ಕಾರ್ಮಿಕರಾಗಿ ನಂತರ ರಾಜಕೀಯ ಜೀವನದಲ್ಲಿ ತಮ್ಮ ಛಾಪು ಮೂಡಿಸಿದ್ದ ಕೃಷ್ಣಪ್ಪ ನಿಧನಕ್ಕೆ ಜೆಡಿಎಸ್ ಮುಖಂಡರು ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
 

ವೆಬ್ದುನಿಯಾವನ್ನು ಓದಿ