ಪ್ರಜ್ವಲ್ ರೇವಣ್ಣಗೆ ಟಿಕೆಟ್: ದೇವೇಗೌಡರ ಗ್ರೀನ್ ಸಿಗ್ನಲ್

ಸೋಮವಾರ, 6 ನವೆಂಬರ್ 2017 (12:09 IST)
ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣಗೆ ಮುಂಬರುವ ವಿಧಾನಸಭೆಯಲ್ಲಿ ಟಿಕೆಟ್ ನೀಡಲು ದೇವೇಗೌಡರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ಭವಾನಿ ರೇವಣ್ಣ ಹೇಳಿದ್ದಾರೆ.
ಬೇಲೂರು ಮತ್ತು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಪೂರಕ ವಾತಾವರಣವಿದೆ. ಆದರೆ, ಯಾವ ಕ್ಷೇತ್ರದಿಂದ ಟಿಕೆಟ್ ನೀಡಬೇಕು ಎನ್ನುವ ಬಗ್ಗೆ ಜೆಡಿಎಸ್ ವರಿಷ್ಠ ದೇವೇಗೌಡರೇ ನಿರ್ಧರಿಸಲಿದ್ದಾರೆ ಎಂದು ತಿಳಿಸಿದ್ದಾರೆ.
 
ಗೌಡರ ಕುಟುಂಬದಿಂದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಎಚ್.ಡಿ.ರೇವಣ್ಣ ಮಾತ್ರ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು.
 
ಇದೀಗ ಪ್ರಜ್ವಲ್ ರೇವಣ್ಣ ವಿಧಾನಸಭೆಗೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಂತಿಮವಾಗಿ ದೇವೇಗೌಡರು ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ