ಘಟಾನುಘಟಿ 'ಕೈ'ಗಳನ್ನು ಸೆಳೆಯಲು ಜೆಡಿಎಸ್ ತೆರೆಮರೆಯ ಕಸರತ್ತು....

ಬುಧವಾರ, 12 ಅಕ್ಟೋಬರ್ 2016 (14:48 IST)
ಮುಂಬರುವ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಜೆಡಿಎಸ್, ಕಾಂಗ್ರೆಸ್ ಪಕ್ಷದಿಂದ ಅಸಮಾಧಾನಗೊಂಡಿರುವ ಘಟಾನುಘಟಿ ನಾಯಕರನ್ನು ಸೆಳೆಯಲು ತೆರೆಮರೆಯ ಕಸರತ್ತು ನಡೆಸಿದೆ ಎನ್ನಲಾಗಿದೆ.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು, ಅಧಿಕಾರದ ಗದ್ದುಗೆ ಹಿಡಿಯಲೇ ಬೇಕು ಎಂದು ಪಣ ತೊಟ್ಟಿರುವ ಜೆಡಿಎಸ್,  ಸಚಿವ ಸ್ಥಾನ ಕಳೆದುಕೊಂಡು ಅಸಮಾಧಾನಗೊಂಡಿರುವ ಕಾಂಗ್ರೆಸ್ ನಾಯಕರಾದ ಶ್ರೀನಿವಾಸ್ ಪ್ರಸಾದ್, ರೆಬಲ್ ‌ಸ್ಟಾರ್ ಅಂಬರೀಶ್, ಸತೀಶ್ ಜಾರಕಿಹೊಳಿ ಹಾಗೂ ಹಿಂದುಳಿದ ವರ್ಗದ ನಾಯಕ ಸಿಎಂ ಇಬ್ರಾಹಿಂ ಅವರನ್ನು ಸೆಳೆಯಲು ಕಸರತ್ತು ನಡೆಸುತ್ತಿದೆ. 
 
ರಾಜ್ಯ ಸಚಿವ ಸಂಪುಟದಿಂದ ಸ್ಥಾನ ಕಳೆದುಕೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಶ್ರೀನಿವಾಸ್ ಪ್ರಸಾದ್ ಮುಂದಿನ ವಾರದಲ್ಲಿ ತಮ್ಮ ಶಾಸಕ ಸ್ಥಾನಕ್ಕೂ ಗುಡ್ ಬೈ ಹೇಳುವ ಸಾಧ್ಯತೆ ಇದ್ದು, ಇವರು ಜೆಡಿಎಸ್ ಪಕ್ಷ ಸೇರ್ಪಡೆಯಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. 
 
ಈಗಾಗಲೇ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ