ಮಾಜಿ ಸಚಿವ ಎಚ್.ವಿಶ್ವನಾಥ್ ಜೆಡಿಎಸ್‌ಗೆ ಬಂದಲ್ಲಿ ಸ್ವಾಗತ: ಕುಮಾರಸ್ವಾಮಿ

ಬುಧವಾರ, 10 ಮೇ 2017 (13:40 IST)
ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಎಚ್.ವಿಶ್ವನಾಥ್ ಅವರಿಗೆ ಗೌರವ ಸಿಗಬೇಕಾಗಿದೆ. ಜೆಡಿಎಸ್ ಪಕ್ಷ ಅವರಿಗೆ ಗೌರವ ನೀಡಲು ಸಿದ್ದವಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ಹಿರಿಯ ರಾಜಕಾರಣಿ ಎಚ್.ವಿಶ್ವನಾಥ್ ಅವರ ಘನತೆಗೆ ತಕ್ಕ ಸ್ಥಾನ, ಗೌರವ ನೀಡಲು ಸಿದ್ದವಿದೆ  ಟಿಕೆಟ್, ಸ್ಥಾನಮಾನದ ಬಗ್ಗೆ ಮಾತುಕತೆ ನಡೆದಿಲ್ಲ ಎಂದು ತಿಳಿಸಿದ್ದಾರೆ.
 
ವಿಶ್ವನಾಥ್ ಅವರೊಂದಿಗೆ ಎರಡು ಬಾರಿ ಚರ್ಚೆ ನಡೆಸಿದ್ದೇನೆ. ಶೀಘ್ರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುತ್ತಾರೆ ಎನ್ನುವ ವಿಶ್ವಾಸವಿದೆ. ಜೆಡಿಎಸ್ ಪಕ್ಷಕ್ಕೆ ಅವರ ನಾಯಕತ್ವ ಅಗತ್ಯವಾಗಿದೆ ಎಂದು ಹೇಳಿದ್ದಾರೆ.
 
ಕಾಂಗ್ರೆಸ್ ಪಕ್ಷದಲ್ಲಿ ತಮಗೆ ಗೌರವ ದೊರೆಯುತ್ತಿಲ್ಲ. ಎಐಸಿಸಿ ಮತ್ತು ಕೆಪಿಸಿಸಿ ಸದಸ್ಯನಾಗಿದ್ದರೂ ಪಕ್ಷದ ಯಾವುದೇ ಕಾರ್ಯಕ್ರಮಕ್ಕೆ ಆಹ್ವಾನ ನೀಡುತ್ತಿಲ್ಲ. ಈಗಾಗಲೇ ಹಲವರು ಪಕ್ಷ ತೊರೆದಿದ್ದಾರೆ. ನಾನು ಕೂಡಾ ಪಕ್ಷ ತೊರೆಯಬಹುದು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ್ ರಾಜ್ಯ ಉಸ್ತುವಾರಿ ಹೊತ್ತಿರುವ ಕೆ.ಸಿ.ವೇಣುಗೋಪಾಲ್ ಅವರಿಗೆ ದೂರು ಸಲ್ಲಿಸಿದ್ದರು.
 
ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ
 
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ 4 ವರ್ಷ ಪೂರೈಸಿದೆ. ಕನಿಷ್ಠ ಅಂಕ ಕೊಡಲು ಅರ್ಹವಾಗಿಲ್ಲ. ಮುಂಬರುವ ಚುನಾವಣೆಯಲ್ಲಿ ಜನರೇ ಅವರಿಗೆ ಅಂಕ ಕೊಡುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ