ಜೆಡಿಎಸ್ ವಿಸರ್ಜನೆ ಮಾಡಲ್ಲ : ಕುಮಾರಸ್ವಾಮಿ

ಬುಧವಾರ, 31 ಮೇ 2023 (09:51 IST)
ಬೆಂಗಳೂರು : ಜೆಡಿಎಸ್ ಪಕ್ಷ ವಿಸರ್ಜನೆ ಮುಹೂರ್ತ ಯಾವಾಗ ಎಂದು ಟಾಂಗ್ ಕೊಟ್ಟಿದ್ದ ಕಾಂಗ್ರೆಸ್  ವಿರುದ್ಧ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಪಕ್ಷ ವಿಸರ್ಜನೆ ಮಾಡಲ್ಲ ಎಂದು ತಿರುಗೇಟು ಕೊಟ್ಟಿದ್ದಾರೆ.

ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನೆ.

ಈ ಸಂಬಂಧ ಟ್ವೀಟ್ ಮಾಡಿರುವ ಹೆಚ್ಡಿಕೆ, ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನೆ ಎಂದು ವಾಗ್ದಾಳಿ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ