ಜಿಹಾದಿಗಳಿಂದಲೇ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ?

ಗುರುವಾರ, 27 ಅಕ್ಟೋಬರ್ 2016 (12:52 IST)
ಹಾಡುಹಗಲೇ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನುವ ವರದಿಗಳು ಲಭ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.
 
ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಘಟನೆಯೊಂದಕ್ಕೆ ಸೇರಿದ ಮೂವರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಆದರೆ, ಆರೋಪಿಗಳ ಬಂಧನದ ಬಗ್ಗೆ ಪೊಲೀಸರು ಅಧಿಕೃತ ಮಾಹಿತಿ ನೀಡಿಲ್ಲ ಎನ್ನಲಾಗಿದೆ. 
 
ಧರ್ಮದ ವಿಚಾರವಾಗಿಯೇ ರುದ್ರೇಶ್ ಅವರನ್ನು ಹತ್ಯೆ ಮಾಡಿರುವುದಾಗಿ ಆರೋಪಿಗಳು ಬಾಯಬಿಟ್ಟಿದ್ದಾರೆ ಎಂದು ಉನ್ನತ ಪೊಲೀಸ್ ಮೂಲಗಳು ತಿಳಿಸಿವೆ. 
 
ಬೆಂಗಳೂರಿನಲ್ಲಿ ಹಾಡುಹಗಲೇ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದರು. ರಾಜ್ಯದಲ್ಲಿ ನಿರಂತರವಾಗಿ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆ ನಡೆಯುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ