ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಹಾಕಿ; ಕೊಪ್ಪಳ ಜಿಲ್ಲೆಯ ಕನಕಗಿರಿ ಎಸ್. ಪಿ. ಎಸ್. ಜಿ. ಎಸ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ 1, 3, ಮತ್ತು 5 ಸೆಮಿಸ್ಟರುಗಳ ಖಾಲಿ ಇರುವ ಕನ್ನಡ, ಇಂಗ್ಲೀಷ್, ಅರ್ಥಶಾಸ್ತ್ರ, ವಾಣಿಜ್ಯಶಾಸ್ತ್ರ ಗಣಕಯಂತ್ರ, ಸಮಾಜಶಾಸ್ತ್ರ ಮತ್ತು ರಾಜ್ಯಶಾಸ್ತ್ರ ವಿಷಯಗಳ ಅತಿಥಿ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕ ನವೆಂಬರ್ 13. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8861319040ಕ್ಕೆ ಸಂಪರ್ಕಿಸಬಹುದು.