ಈದ್ಗಾ ಮೈದಾನದಲ್ಲಿ ರಾಜ್ಯೋತ್ಸವಕ್ಕೆ ಪಟ್ಟು

ಮಂಗಳವಾರ, 27 ಸೆಪ್ಟಂಬರ್ 2022 (11:48 IST)
ಬೆಂಗಳೂರು : ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ, ಗಣೇಶ ಗಲಾಟೆ ಬಳಿಕ ಇದೀಗ ಕನ್ನಡ ಸಂಘಟನೆಗಳು ಹಾಗೂ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ಕೋರಿದ್ದಾರೆ.

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸರ್ಕಾರದಿಂದಲೇ ಸ್ವಾತಂತ್ರ್ಯೋತ್ಸವದ ದಿನ ತ್ರಿವರ್ಣ ಧ್ವಜಾರೋಹಣ ನೆರವೇರಿಸಿತ್ತು. ಆದರೆ ಗಣೇಶೋತ್ಸವದಂದು ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕೇಳಿ ಹೈಡ್ರಾಮವೇ ನಡೆದಿತ್ತು.

ಕೊನೆ ಕ್ಷಣದವರೆಗೂ ಒತ್ತಾಯಿಸಿದ್ದರೂ ಗಣೇಶೋತ್ಸವಕ್ಕೆ ಸುಪ್ರೀಂ ಕೋರ್ಟ್ನಿಂದ ಅನುಮತಿ ಸಿಕ್ಕಿರಲಿಲ್ಲ. ಇದೀಗ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಪಟ್ಟು ಹಿಡಿಯಲಾಗಿದೆ.

ಕನ್ನಡ ಸಂಘಟನೆಗಳಿಗೆ ಕನ್ನಡ ಬಾವುಟ ಹಾರಿಸಲು ಅವಕಾಶ ಕೊಡಬೇಕು. ಈ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವವನ್ನ ಆಚರಿಸಬೇಕೆಂಬ ಧ್ವನಿ ಎತ್ತಿದ್ದು ನಾವು. ಸರ್ಕಾರ ಕನ್ನಡ ಹೋರಾಟಗಾರರಿಗೆ ಅವಕಾಶ ಕೊಡಬೇಕು. ಇದರಲ್ಲಿಯೂ ರಾಜಕೀಯ ಮಾಡಲು ಹೋಗಬೇಡಿ ಎಂದು ಕನ್ನಡ ಪರ ಹೋರಾಟಗಾರ ಶಿವಕುಮಾರ್ ಕಟುವಾಗಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ