ಕಲಿಕೆ ಉತ್ತೇಜಿಸಲು ಬಹುಮಾನ ಘೋಷಿಸಿದ ಜೋಶಿ

ಸೋಮವಾರ, 19 ಸೆಪ್ಟಂಬರ್ 2022 (09:43 IST)
ಧಾರವಾಡ : ಮಕ್ಕಳಲ್ಲಿ ಗಣಿತ ಕುರಿತು ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಆಯೋಜಿಸಿರುವ ಗಣಿತ ಮೇಳ ವಿಭಿನ್ನ, ವಿಶಿಷ್ಠವಾದದ್ದು. ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಸ್ಪರ್ಧೆ ಕೂಡಾ ಆಯೋಜಿಸಬೇಕು.

ಪ್ರಥಮ ಸ್ಥಾನ ಪಡೆಯುವ ವಿದ್ಯಾರ್ಥಿಗೆ 25 ಸಾವಿರ ರೂಪಾಯಿ, ದ್ವಿತೀಯ ಸ್ಥಾನ 15 ಸಾವಿರ ಮತ್ತು ತೃತೀಯ ಸ್ಥಾನ ಪಡೆಯುವ ವಿದ್ಯಾರ್ಥಿಗೆ ವೈಯಕ್ತಿಕವಾಗಿ ಬಹುಮಾನ ನೀಡುತ್ತೇನೆ ಎಂದು ಸಚಿವ ಪ್ರಹ್ಲಾದ್ ಜೋಶಿ ಘೋಷಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಜನ್ಮದಿನದ ಅಂಗವಾಗಿ ನಗರದ ಕರ್ಷ ಜ್ಞಾನ ಫೌಂಡೇಶನ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕೆ.ಇ. ಬೋರ್ಡ್ ಸಂಸ್ಥೆ ಜಂಟಿಯಾಗಿ ಇಲ್ಲಿನ ಕರ್ನಾಟಕ ಪ್ರೌಢಶಾಲೆಯಲ್ಲಿ ಆಯೋಜಿಸಿರುವ ಎರಡು ದಿನಗಳ ಮೋಜಿನೊಂದಿಗೆ ಗಣಿತ ಕಲಿಕೆ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.

ನಿತ್ಯ ಬದುಕಿನ ಭಾಗವಾಗಿರುವ ಗಣಿತದ ಕುರಿತು ಆಸಕ್ತಿ ಮೂಡಿಸುವ ಅಗತ್ಯವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿಪ್ರಾಯಪಟ್ಟರು. ಭಾರತೀಯ ವೇದ, ಪುರಾಣಗಳಲ್ಲಿ ಗಣಿತದ ಉಲ್ಲೇಖವಿದ್ದು, ಗಣಿತ ಶಾಸ್ತ್ರಕ್ಕೆ ಮೂರು ಸಾವಿರ ವರ್ಷಗಳ ಇತಿಹಾಸವಿದೆ.

ಜಗತ್ತಿಗೆ ಸೊನ್ನೆ ಪರಿಚಯಿಸಿದ ಕೀರ್ತಿ ಭಾರತೀಯರಿಗೆ ಸಲ್ಲುತ್ತದೆ. ಭಾಸ್ಕರಾಚಾರ್ಯರಿಂದ ಹಿಡಿದು ಇತ್ತೀಚಿಗಿನ ಶ್ರೀನಿವಾಸ ರಾಮಾನುಜನ್ ಸೇರಿದಂತೆ ಅನೇಕ ಗಣಿತ ಶಾಸ್ತ್ರಜ್ಞರು ಬಹುದೊಡ್ಡ ಕೊಡುಗೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ