ಮೈಸೂರು : ಕ್ರಿಮಿನಲ್ ಪ್ರಕರಣಗಳ ಆರೋಪಿ ಸ್ಯಾಂಟ್ರೋ ರವಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ನ್ಯಾಯಾಲಯದ ನ್ಯಾಯಾಧೀಶರಾದ ಎಸ್.ಗುರುರಾಜ್ ಅವರು ಆದೇಶ ಹೊರಡಿಸಿದ್ದಾರೆ. ಇದರಿಂದಾಗಿ ಸ್ಯಾಂಟ್ರೋ ರವಿ ಜೊತೆಗೆ ಸಹಚರರಾದ ರಾಮ್ ಜೀ, ಸತೀಶ್ ಕೂಡ ಜೈಲು ಪಾಲಾಗಿದ್ದಾರೆ.
ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ಸ್ಯಾಂಟ್ರೋ ರವಿಯನ್ನು ಪೊಲೀಸರು ಕರೆದೊಯ್ದಿದ್ದಾರೆ.
ವೇಶ್ಯಾವಾಟಿಕೆ ದಂಧೆ, ಜಾತಿ ನಿಂದನೆ, ಸರ್ಕಾರಿ ಅಧಿಕಾರಿಗಳ ವರ್ಗಾವಣೆ ದಂಧೆ ಸೇರಿದಂತೆ ಅನೇಕ ಕ್ರಿಮಿನಲ್ ಪ್ರಕರಣಗಳ ಆರೋಪ ಹೊತ್ತಿದ್ದ ಸ್ಯಾಂಟ್ರೋ ರವಿಯನ್ನು ಶುಕ್ರವಾರ ಗುಜರಾತ್ನ ಅಹಮದಾಬಾದ್ನಲ್ಲಿ ಪೊಲೀಸರು ಬಂಧಿಸಿದ್ದರು. ನಂತರ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಸ್ಯಾಂಟ್ರೋ ರವಿ ವಿರುದ್ಧ ಆತನ ಎರಡನೇ ಪತ್ನಿ ಕೂಡ ದೂರು ನೀಡಿದ್ದಾರೆ.