ಕೋಲಾರದಲ್ಲಿ ಬಿಜೆಪಿಯ ಜನಪ್ರತಿನಿಧಿಗಳು ಅಧಿಕಾರಿಗಳನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರಂತೆ

ಶನಿವಾರ, 23 ಮೇ 2020 (08:58 IST)
ಕೋಲಾರ : ಕೋಲಾರದಲ್ಲಿ ಬಿಜೆಪಿಯ ಜನಪ್ರತಿನಿಧಿಗಳು ಅಧಿಕಾರಿಗಳನ್ನು ಬ್ಲ್ಯಾಕ್ ಮೇಲ್ ಮಾಡಿ ಪರ್ಸಂಟೇಜ್ ಫಿಕ್ಸ್ ಮಾಡಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಗಂಭೀರ ಆರೋಪ ಮಾಡಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಶಾಶ್ವತವಲ್ಲ. ಅಧಿಕಾರ ಸಿಕ್ಕಾಗ ಯಾರೇ ಆಗಲಿ ಪಕ್ಷಾತೀತವಾಗಿ ಬೇಧಭಾವವಿಲ್ಲದೆ ಜಿಲ್ಲೆಯ ಜನ ಮೆಚ್ಚುವಂತಹ ಕೆಲಸ ಮಾಡಬೇಕು. ನಾವು ಗೆದ್ದಿದ್ದೀವಿ ಶಾಶ್ವತವಾಗಿ ನಾವೇ ಇರುತ್ತೇವೆ ಎಂಬ ಭ್ರಮೆಯಲ್ಲಿ ಬಿಜೆಪಿ ನಾಯಕರು ವರ್ತಿಸುತ್ತಿದ್ದಾರೆ. ಗಾಳಿಯಲ್ಲಿ ಅಧಿಕಾರ ಬಂದಿದೆ, ಅದನ್ನು ಗಾಳಿಯಲ್ಲಿಯೇ ಕಳೆದುಕೊಳ್ಳಬಾರದು ಎಂದು ಕೋಲಾರದ ಉಸ್ತುವಾರಿ ಸಚಿವ ಹೆಚ್.ನಾಗೇಶ್ ಹಾಗೂ ಸಂಸದ ಎಸ್.ಮುನಿಸ್ವಾಮಿ ಹೆಸರು ಹೇಳದೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ