ಲೋಕಾಯುಕ್ತರಾಗಿ ನ್ಯಾ.ಬಿ.ಎಸ್.ಪಾಟೀಲ್‌ ಪ್ರಮಾಣ ವಚನ ಸ್ವೀಕಾರ

ಬುಧವಾರ, 15 ಜೂನ್ 2022 (17:08 IST)
ರಾಜ್ಯದ ನೂತನ ಲೋಕಾಯುಕ್ತರಾಗಿ ನ್ಯಾ. ಬಿ. ಎಸ್ ಪಾಟೀಲ ಅವರು ಅಧಿಕಾರ ಸ್ವೀಕಾರ ಮಾಡಿದರು. ಬುಧವಾರ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ನೂತನ ಲೋಕಾಯುಕ್ತ ನ್ಯಾ. ಬಿ. ಎಸ್ ಪಾಟೀಲ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಹಿಂದೆ ಲೋಕಾಯುಕ್ತರಾಗಿದ್ದ ನ್ಯಾ. ಪಿ ವಿಶ್ವನಾಥ್ ಶೆಟ್ಟಿ ಅವರು, ಜನವರಿ 27, 2022 ರಲ್ಲಿ ನಿವೃತ್ತಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಹುದ್ದೆ ಖಾಲಿ ಇತ್ತು. ಈ ಹಿನ್ನೆಲೆಯಲ್ಲಿ ಉಪ ಲೋಕಾಯುಕ್ತರಾಗಿದ್ದ ನ್ಯಾ. ಬಿ. ಎಸ್ ಪಾಟೀಲ ಅವರನ್ನು ಇದೀಗ ಲೋಕಾಯುಕ್ತರನ್ನಾಗಿ ನೇಮಕ ಮಾಡಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹಾಗೂ ಉಭಯ ಸದನಗಳ ವಿರೋಧ ಪಕ್ಷದ ನಾಯಕರ ಜತೆಗೆ ಸಮಾಲೋಚನೆ ನಡೆಸಿ ಲೋಕಾಯುಕ್ತ ಸ್ಥಾನಕ್ಕೆ ನ್ಯಾ. ಬಿ. ಎಸ್ ಪಾಟೀಲ ಹೆಸರನ್ನು ಶಿಫಾರಸು ಮಾಡಿದ್ದರು.
ಮಂಗಳವಾರ ರಾಜ್ಯಪಾಲರು ನೇಮಕಾತಿ ಆದೇಶವನ್ನು ಹೊರಡಿಸಿದ್ದರು. ಬುಧವಾರ ರಾಜಭವನದ ಗಾಜಿನ ಮನೆಯಲ್ಲಿ ಬೆಳಗ್ಗೆ 9.45 ಕ್ಕೆ ನ್ಯಾ. ಬಿ. ಎಸ್ ಪಾಟೀಲ ಅವರು ಲೋಕಾಯುಕ್ತರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ