ಜಸ್ಟೀಸ್ ಪಾರ್‌ ಅತುಲ್ ಸುಭಾಷ್‌ ಟ್ರೆಂಡ್, ಪತ್ನಿಯನ್ನು ಕೆಲಸದಿಂದ ಕಿತ್ತೆಸೆಯಲು ಒತ್ತಾಯ ಜೋರು

Sampriya

ಗುರುವಾರ, 12 ಡಿಸೆಂಬರ್ 2024 (16:57 IST)
Photo Courtesy X
ಬೆಂಗಳೂರು: ಸಿಲಿಕಾನ್ ಸಿಟಿಯ 34ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಅತುಲ್ ಸುಭಾಷ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣದ ರಾಷ್ಟ್ರದಾದ್ಯಂತ ಸದ್ದು ಮಾಡುತ್ತಿದ್ದು, ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಅತುಲ್ ಅವರು ಆತ್ಮಹತ್ಯೆಗೂ ಮುನ್ನಾ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾನದಲ್ಲಿ ವೈರಲ್ ಆಗಿದೆ.

ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಜಸ್ಟೀಸ್ ಫಾರ್ ಅತುಲ್ ಸುಭಾಷ್ ಟ್ರೆಂಡ್ ಶುರುವಾಗಿದೆ.  ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲೂ ಬಳಕೆದಾರರು ನ್ಯಾಯಕ್ಕಾಗಿ ಬೇಡಿಕೆ ಇರಿಸಿದ್ದಾರೆ.

ಒಬ್ಬರು ಭಾರತದಲ್ಲಿ ನ್ಯಾಯ ವ್ಯವಸ್ಥೆಯು ಹದಗೆಟ್ಟಿದ್ದು, ನ್ಯಾಯಾಂಗ ವ್ಯವಸ್ಥೆಯೇ ಸಂಪೂರ್ಣವಾಗಿ ಬದಲಾಗಬೇಕಿದೆ ಎಂದು ಬರೆದುಕೊಂಡಿದ್ದಾರೆ. ಕೆಲವರು ಲಿಂಗ ಸಮಾನತೆಯ ನ್ಯಾಯಕ್ಕಾಗಿ ಮೊರೆ ಇಟ್ಟಿದ್ದಾರೆ.

ಈ ಟ್ರೆಂಡ್‌ನಲ್ಲಿ ಅತುಲ್ ಸುಭಾಷ್ ಅವರ ಪತ್ನಿಯನ್ನು ಕೆಲಸದಿಂದ ತೆಗೆದು ಹಾಕುವಂತೆಯೂ ಬೇಡಿಕೆ ಬಲವಾಗಿ ಕೇಳಿಬಂದಿದೆ.

ಇದೀಗ ಅತುಲ್ ಆತ್ಮಹತ್ಯೆ ಪ್ರಕರಣ ತನಿಖೆ ಚುರುಕುಮಾಡಿರುವ ಪೊಲೀಸ್ ತಂಡ ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು  ತಿಳಿಸಿದ್ದಾರೆ.

ಸಹೋದರ ಬಿಕಾಸ್ ಕುಮಾರ್ ಅವರು ನೀಡಿದ ದೂರು ಆಧರಿಸಿ ಅತುಲ್ ಸುಭಾಷ್‌ ಅವರ ಪತ್ನಿ, ಆಕೆಯ ತಾಯಿ, ಸಹೋದರ ಹಾಗೂ ಚಿಕ್ಪಪ್ಪನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಆತ್ಮಹತ್ಯೆಗೂ ಮುನ್ನ ಅತುಲ್ ಸುಭಾಷ್ ಮಾಡಿದ್ದ 90 ನಿಮಿಷಗಳ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. 'ಭಾರತದಲ್ಲಿ ನರಮೇಧ ನಡೆಯುತ್ತಿದೆ. ಜನರನ್ನು ರಕ್ಷಿಸಿ ವಾಕ್ ಸ್ವಾತಂತ್ರ್ಯ ಮರುಸ್ಥಾಪಿಸಿ' ಎಂದು ಮನವಿ ಮಾಡಿದ್ದರಲ್ಲದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾಗೂ ಟೆಸ್ಲಾ ಕಂಪನಿ ಸಿಇಒ ಇಲಾನ್ ಮಸ್ಕ್​ ಅವರ ನೆರವನ್ನು ಕೇಳಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ