ಸಚಿವ ರಾಜೀನಾಮೆ ನೀಡದಿದ್ರೆ ರಾಜ್ಯದಾದ್ಯಂತ ಹೋರಾಟ: ಬಿಎಸ್‌ವೈ ಎಚ್ಚರಿಕೆ

ಶುಕ್ರವಾರ, 27 ಅಕ್ಟೋಬರ್ 2017 (18:33 IST)
ಗಣಪತಿ ಪ್ರಕರಣದ ತನಿಖೆಗೆ ಕೇಂದ್ರ ಸರಕಾರ ಆದೇಶ ನೀಡಿಲ್ಲ. ಕೋರ್ಟ್‌ ಆದೇಶದ ಮೇರೆಗೆ ಸಿಬಿಐ ತನಿಖೆ ನಡೆಸುತ್ತಿದ್ದು ಸಚಿವ ಜಾರ್ಜ್ ವಿರುದ್ಧ ಎಫ್‌ಐಆರ್ ದಾಖಲಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ಗಣಪತಿ ಪ್ರಕರಣದಲ್ಲಿ ನಂಬರ್ ಒನ್ ಆರೋಪಿಯಾಗಿರುವ ಸಚಿವ ಜಾರ್ಜ್‌ರನ್ನು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಳ್ಳುತ್ತಿರುವುದು ನಾಚಿಕೆಗೇಡಿತನದ ಸಂಗತಿ ಎಂದು ಹರಿಹಾಯ್ದರು.
 
ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಸಿಐಡಿ ತನಿಖೆ ನಡೆಸುತ್ತಿರುವ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದರು. ಯಾಕೆಂದರೆ ಸಿಐಡಿ ಅವರಿಗೆ ಕ್ಲೀನ್ ಚಿಟ್ ನೀಡುತ್ತದೆ ಎನ್ನುವುದು ತಿಳಿದಿತ್ತು. ಇದೀಗ ಸಿಬಿಐ ಎಫ್‌ಐಆರ್ ದಾಖಲಿಸಿದರೂ ರಾಜೀನಾಮೆಗೆ ಹಿಂದೇಟು ಹಾಕುತ್ತಿರುವುದು ಸರಿಯಲ್ಲ ಎಂದರು.
 
ಸಚಿವ ಜಾರ್ಜ್ ರಾಜೀನಾಮೆ ನೀಡುವವರೆಗೆ ಬಿಜೆಪಿ ರಾಜ್ಯದಾದ್ಯಂತ ಹೋರಾಟ ನಡೆಸಲಿದೆ. ಮುಂಬರುವ ಅಧಿವೇಶನದಲ್ಲಿ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ