ರಾಜ್ಯಾದ್ಯಂತ ಕಾವೇರಿ ವಿಷಯ ಬೃಹದಾಕಾರವಾಗಿ ಎದುರಾಗಿರುವ ಹಿನ್ನೆಲೆಯಲ್ಲಿ, ಕಾವೇರಿ ಕಿಚ್ಚು ಆರಿದ ನಂತರ ಜಾರ್ಜ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
ಡಿವೈಎಸ್‌ಪಿ ಗಣಪತಿ ಮಾಜಿ ಸಚಿವ ಕೆ.ಜೆ.ಜಾರ್ಜ್, ಹಿರಿಯ ಐಪಿಎಸ್ ಅಧಿಕಾರಿಗಳಾದ ಪ್ರಸಾದ್, ಮೊಹಾಂತಿ ಕಿರುಕುಳ ನೀಡಿದ್ದು, ನನ್ನ ಆತ್ಮಹತ್ಯೆಗೆ ಅವರೇ ಕಾರಣವಾಗಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆಗೆ ಶರಣಾಗಿದ್ದರು.