ಬೆಂಗಳೂರು ವಿವಿ ಉಪಕುಲಪತಿಯಾಗಿ ಕೆ. ಆರ್. ವೇಣುಗೋಪಾಲ ನೇಮಕ ರದ್ದು

ಗುರುವಾರ, 17 ಮಾರ್ಚ್ 2022 (16:09 IST)
ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಕೆ.ಆರ್. ವೇಣುಗೋಪಾಲ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶ ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯಪೀಠದ ಆದೇಶವನ್ನು ವಿಭಾಗೀಯಪೀಠ ಬುಧವಾರ ಎತ್ತಿಹಿಡಿದಿದೆ.
ನ್ಯಾಯಾಲಯದ ಮಧ್ಯಂತರ ಆದೇಶದ ಹಿನ್ನೆಲೆಯಲ್ಲಿ ಅವರು ಈವರೆಗೆ ಕುಲಪತಿಯಾಗಿ ಮುಂದುವರಿದಿದ್ದರು. ಆದರೆ ಈಗ ಉಪಕುಲಪತಿ ವೇಣುಗೋಪಾಲ್ ತಮ್ಮ ಹುದ್ದೆ ತ್ಯಜಿಸಬೇಕಾಗುತ್ತದೆ. ಅವರ ಸೇವಾವಧಿ ಜೂನ್ 12ರವರೆಗೆ ಇದೆ, ಆದರೂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹುದ್ದೆ ತ್ಯಜಿಸಬೇಕು, ಇಲ್ಲವೇ ಸುಪ್ರೀಂಕೋರ್ಟ್ ಮೊರೆ ಹೋಗಿ ಕೂಡಲೇ ಹೈಕೋರ್ಟ್ ವಿಭಾಗೀಯಪೀಠದ ಆದೇಶಕ್ಕೆ ತಡೆಯಾಜ್ಞೆ ತರಬೇಕಾದ ಅನಿವಾರ್ಯತೆ ಎದುರಾಗಿದೆ.
 
ಏಕಸದಸ್ಯ ಪೀಠದ ತೀರ್ಪು ಪ್ರಶ್ನಿಸಿ ಬೆಂಗಳೂರು ವಿಶ್ವವಿದ್ಯಾಲಯ, ರಾಜ್ಯಪಾಲರ ಕಚೇರಿ, ಡಾ.ಕೆ. ಆರ್. ವೇಣುಗೋಪಾಲ್ ಮತ್ತು ರಾಜ್ಯ ಉನ್ನತ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರತ್ಯೇಕ ನಾಲ್ಕು ಮೇಲ್ಮನವಿ ಕುರಿತು ನ್ಯಾಯಮೂರ್ತಿ ಎಸ್.ಸುಜಾತ ಮತ್ತು ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣನವರ್ ಅವರಿದ್ದ ವಿಭಾಗೀಯಪೀಠ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿತ್ತು. ಬುಧವಾರ ನ್ಯಾಯಪೀಠ ತೀರ್ಪು ಪ್ರಕಟಿಸಿದ್ದು, ಎಲ್ಲಾ ಮೇಲ್ಮನವಿಗಳನ್ನು ವಜಾಗೊಳಿಸಿ ಏಕಸದಸ್ಯಪೀಠದ ಆದೇಶ ಎತ್ತಿಹಿಡಿದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ